ಕಾಸರಗೋಡು : ಡಿಸೆಂಬರ್ ನಲ್ಲಿ ಮದುವೆಯಾಗಬೇಕಿದ್ದ ಯುವತಿ ಆತ್ಮಹತ್ಯೆ – ಭಾವಿ ಪತ್ನಿಯ ಸಾವಿನ ವಿಚಾರ ತಿಳಿದು ಯುವಕನೂ ಆತ್ಮಹತ್ಯೆ !

Advertisement

ಕಾಸರಗೋಡು, ಆ. 13 : ಮುಂಬರುವ ಡಿಸೆಂಬರ್ 26 ರಂದು ಮದುವೆಯಾಗಬೇಕಿದ್ದ ಬ್ಯಾಂಕ್ ಉದ್ಯೋಗಿ ಯುವ ಜೋಡಿಯೊಂದು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಕಾಸರಗೋಡು ಪಳ್ಳಿಕ್ಕರ ಮೂಲದ, ಹುಣಸೂರು ಎಸ್‌ಬಿಐ ಶಾಖೆಯ ಉದ್ಯೋಗಿ ಪಿ. ಅನುಶ್ರೀ (25) ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಸುದ್ದಿ ತಿಳಿದ ಕೆಲವೇ ಗಂಟೆಗಳಲ್ಲಿ, ಅವರ ನಿಶ್ಚಿತಾರ್ಥವಾಗಿದ್ದ ಕಣ್ಣೂರು ಮೂಲದ, ಕೊಚ್ಚಿ ಎಂ.ಜಿ. ರೋಡ್ ಎಸ್‌ಬಿಐ ಶಾಖೆ ಕ್ಲರ್ಕ್ ವಿ. ಅಮಲ್ (26) ಎರ್ನಾಕುಲಂ ರೈಲ್ವೆ ನಿಲ್ದಾಣ ಬಳಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Advertisement

ಕಳೆದ ಶನಿವಾರವಷ್ಟೇ ಸ್ವಗ್ರಾಮಕ್ಕೆ ಭೇಟಿ ನೀಡಿದ್ದ ಇಬ್ಬರೂ ಭಾನುವಾರ ವಾಪಸ್ ತೆರಳಿದ್ದರು. ಪ್ರಸ್ತುತ ಹುಣಸೂರು ಹಾಗೂ ಎರ್ನಾಕುಲಂ ಟೌನ್ ನಾರ್ತ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಿವಾಹದ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರಂತ ತೀವ್ರ ಆಘಾತ ಮೂಡಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ