ಕಾಸರಗೋಡು : ರಸಮಂಜರಿ ಕಾರ್ಯಕ್ರಮದಲ್ಲಿ ಕಾಲ್ತುಳಿತ – 15 ಮಂದಿಗೆ ಗಾಯ – ಆಯೋಜಕರ ವಿರುದ್ಧ ಪ್ರಕರಣ ದಾಖಲು

Advertisement

ಕಾಸರಗೋಡು : ಜಿಲ್ಲೆಯ ನುಳ್ಳಿಪ್ಪಾಡಿ ಎಂಬಲ್ಲಿ ರವಿವಾರ ರಾತ್ರಿ ನಡೆದ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲು ಹಾಗೂ ಕಾಲ್ತುಳಿತಕ್ಕೆ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿಯ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಯುವಜನ ಸಂಘಟನೆಯಾದ ‘ಫ್ರೀ’ ನೇತೃತ್ವದಲ್ಲಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆ ಮೂರು ಸಾವಿರ ಮಂದಿಗೆ ಪ್ರವೇಶ ಪಾಸ್ ನೀಡುವಂತೆ ಪೊಲೀಸರು ಲಿಖಿತವಾಗಿ ಮುನ್ನೆಚ್ಚರಿಕೆ ನೀಡಿದ್ದರು. ಆದರೆ ಹತ್ತು ಸಾವಿರ ಮಂದಿಗೆ ಪಾಸ್ ನೀಡಲಾಗಿತ್ತು ಎನ್ನಲಾಗಿದೆ. ನಿರೀಕ್ಷೆಗೂ ಮೀರಿ ಜನರು ಆಗಮಿಸಿದ್ದರಿಂದ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಮೈದಾನದ ಹೊರಗಡೆ ಸೇರಿದ್ದವರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆಯಿತು.

Advertisement

ನಡೆದಿದ್ದೇನು ?

ಕಾಸರಗೋಡು ಫೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಸಾಮಾಜಿಕ ಮಾಧ್ಯಮ ಪ್ರಭಾವಿ, ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಲ್ಲಿ ಮೈದಾನಕ್ಕೆ ಒಳನುಗ್ಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಗಿ, ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದರು ಎನ್ನಲಾಗಿದೆ. ಪೊಲೀಸರು ನೀಡಿದ್ದ ಎಚ್ಚರಿಕೆಯನ್ನೂ ನಿರ್ಲಕ್ಷಿಸಿದ್ದರು ಎಂದು ಆರೋಪಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ