ವಿಟ್ಲ : ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಅಪರಿಚಿತ KTM ಬೈಕ್ ಸವಾರ !

Advertisement

ವಿಟ್ಲ, ಏ. 13 : ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾದ ಘಟನೆ ವಿಟ್ಲ ಪಡೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.

Advertisement

ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ, ಕೆಟಿಎಂ (KTM) ಬೈಕಿನಲ್ಲಿ ಬಂದ ವ್ಯಕ್ತಿಯೋರ್ವ ಮಗುವಿನ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯವು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ಸವಾರನು ಹೆಲೈಟ್ ಧರಿಸಿ ವೇಗವಾಗಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ.

Advertisement

ವಿಟ್ಲ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚಬೇಕು. ಈ ಭಾಗದಲ್ಲಿ ಗಸ್ತು ಹೆಚ್ಚಿಸಿ, ಜನಸಾಮಾನ್ಯರು ಭಯರಹಿತವಾಗಿ ಜೀವನ ನಡೆಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ