ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಹೋರಿಗಳ ಜಗಳ – ಎಡವಿ ಬಿದ್ದು ಮಹಿಳೆ, ಮಗುವಿಗೆ ಗಾಯ

ಸುಬ್ರಹ್ಮಣ್ಯ, ಮಾ. 09 : ಕುಕ್ಕೆ ಸುಬ್ರಹ್ಮಣ್ಯದ ರಥಬೀದಿಯಲ್ಲಿ ಹೋರಿಗಳ ಜಗಳದಿಂದಾಗಿ ಓರ್ವ ಮಹಿಳೆ ಹಾಗೂ ಮಗು ಬಿದ್ದು ಗಾಯಗೊಂಡಿರುವ ಘಟನೆ ವರದಿಯಾಗಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಎರಡು ಹೋರಿಗಳ ನಡುವೆ ಜಗಳವಾಗಿದ್ದು, ಈ ವೇಳೆ ಅದನ್ನು ಬಿಡಿಸಲು ಯತ್ನಿಸಿದಾಗ ಹೋರಿಗಳು ರಥಬೀದಿಯಲ್ಲಿ ಸಾಗುತ್ತಿದ್ದ ಭಕ್ತರ ನಡುವೆ ಓಡಿದೆ. ಪರಿಣಾಮ ಮಹಿಳೆ ಹಾಗೂ ಮಗು ಎಡವಿ ಬಿದ್ದಿದ್ದಾರೆ. ಇಬ್ಬರಿಗೂ ಅಲ್ಪ ಗಾಯವಾಗಿದ್ದು, ಸ್ಥಳದಲ್ಲಿದ್ದವರು ಬಿದ್ದವರನ್ನು ಎದ್ದೇಳಿಸಿ ಉಪಚರಿಸಿದ್ದಾರೆ. ಘಟನೆಯ ವೀಡಿಯೋ ವೈರಲ್ ಆಗಿದೆ.

ನಿಯಂತ್ರಣ ಕ್ರಮಕ್ಕೆ ಆಗ್ರಹ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲವು ಸಮಯಗಳಿಂದ ಬೀಡಾಡಿ ಜಾನುವಾರು, ಬೀದಿ ನಾಯಿಗಳ ಹಾವಳಿ ಹೆಚ್ಚಳಗೊಂಡಿದ್ದು, ಪರಿಣಾಮ ಸಾರ್ವಜನಿಕರು, ಭಕ್ತರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಕ್ರಮಕ್ಕೆ ಮನವಿ ಮಾಡಿದರೂ ಕ್ರಮ ವಹಿಸಲಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಹಲವಾರು ಘಟನೆಗಳು ನಡೆದಿದ್ದು, ಸಂಬಂಧಪಟ್ಟ ಇಲಾಖೆ ಹಾಗೂ ದೇಗುಲದ ಆಡಳಿತ ಮಂಡಳಿಯೂ ಇದಕ್ಕೆ ಸೂಕ್ತವಾದ ಕ್ರಮವನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.