ಸುಬ್ರಹ್ಮಣ್ಯ : ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ – ಇಂದಿನಿಂದ ಸರ್ಪಸಂಸ್ಕಾರ ಸೇವೆ ಪುನರಾರಂಭ

Advertisement

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಸಮಾಪ್ತಿಗೊಂಡಿತು. ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ಹಾಗೂ ಮುಂಜಾನೆ ದೇವಸ್ಥಾನದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯರು ವಿಧಿ ವಿಧಾನ ನೆರವೇರಿಸಿದರು. ಬಳಿಕ ಕೊಪ್ಪರಿಗೆಯನ್ನು ಇಳಿಸಲಾಯಿತು.

Advertisement

ಉತ್ಸವದ ನಿಮಿತ್ತ ಶ್ರೀ ದೇಗುಲದ ಹೊರಾಂಗಣದ ಸುತ್ತಲೂ ನೀರನ್ನು ಮಧ್ಯಾಹ್ನದ ಅನಂತರ ತುಂಬಿಸಲಾಗಿತ್ತು. ರಾತ್ರಿ ಮಹಾ ಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಲ್ಲಕ್ಕಿ ಉತ್ಸವ ಆರಂಭವಾಯಿತು. ಅನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯಿತು.
ಶ್ರೀ ಕ್ಷೇತ್ರದಲ್ಲಿ ಡಿ. 3ರಂದು ಸರ್ಪಸಂಸ್ಕಾರ ಸೇವೆ ಪುನರಾರಂಭಗೊಳ್ಳಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ