ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಆಟಿಡೊಂಜಿ ದಿನ : ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Advertisement

ಬೆಳ್ತಂಗಡಿ, ಆ. 16 : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ, ಕುಲಾಲ, ಕುಂಬಾರರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಮತ್ತು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಕಟ್ಟಡ ಸಮಿತಿ ಇದರ ಸಹಯೋಗದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ ಅಭಿನಂದನಾ ಕಾರ್ಯಕ್ರಮ ಆ.16ರಂದು ಕುಲಾಲ ಮಂದಿರದಲ್ಲಿ ಜರುಗಿತು.

Advertisement



ಸಮಾರಂಭದಲ್ಲಿ ಬೆಸ್ಟ್‌ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರನ್ನು ಶಾಲು ಹೊದಿಸಿ, ಪೇಟಾ ತೊಡಿಸಿ ಕುಲಾಲ ಸಮಾಜದ ವತಿಯಿಂದ ಗೌರವಿಸಲಾಯಿತು.

ನಂತರ ಮಾತನಾಡಿದ ಶಾಸಕರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಲಾಲ ಸಂಘದ ಸಭಾ ಭವನ ನಿರ್ಮಾಣಕ್ಕೆ ರೂ.1.50 ಕೋಟಿ ಅನುದಾನ ಮಂಜೂರುಗೊಳಿಸಿದ್ದೇನೆ. ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳಲಿದೆ ಎಂದು ತಿಳಿಸಿ, ಕುಲಾಲ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಪ್ರಗತಿಪರ ಕೃಷಿಕರಾದ ವಿಶ್ವನಾಥ ಮೂಲ್ಯ ವರಕಬೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಭಾರ ಅಧ್ಯಕ್ಷರಾದ ಯಾದವ ಮೂಲ್ಯ ಮುಂಡೂರು ವಹಿಸಿ, ಆಟಿ ಆಚರಣೆಯ ವಿಶೇಷತೆ ಬಗ್ಗೆ ಮಾತನಾಡಿ, ಸಮಾಜದ ಸಂಘಟನೆಗೆ ಎಲ್ಲರ ಸಹಕಾರ ಕೋರಿದರು.

ಸಂಪನ್ಮೂಲ ವ್ಯಕ್ತಿ ಪ್ರಮೋದ್ ಕುಲಾಲ್, ಅಧ್ಯಕ್ಷರು, ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಕಾರು ಆಟಿ ಆಚರಣೆಯ ವಿಶೇಷತೆ ಬಗ್ಗೆ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸುಜಾತಾ ಪಿ. ಸಾಲ್ಯಾನ್, ದಿನೇಶ್ ಮೂಲ್ಯ ಕೊಂಡೆಮಾರ್ ಅಧ್ಯಕ್ಷರು, ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ, ಶ್ರೀಮತಿ ಜಯಶ್ರೀ ನಾರಾಯಣ ಭಾಗವಹಿಸಿದ್ದರು.

ಗೌರವಾಧ್ಯಕ್ಷ ಹರೀಶ್‌ ಕಾರಿಂಜ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಮೂಲ್ಯರ ಯಾನೆ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಅವಿನಾಶ್ ಕುಲಾಲ್ ಮಾಣೂರು, ಕುಲಾಲ ಕುಂಬಾರರ ಮಹಿಳಾ ವೇದಿಕೆ ಅಧ್ಯಕ್ಷೆ ಶ್ರೀಮತಿ ಆಶಾಲತಾ ತಿಲಕ್‌ರಾಜ್‌, ನಿಕಟಪೂರ್ವ ಅಧ್ಯಕ್ಷ ಸೋಮಯ್ಯ ಮೂಲ್ಯ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳಿಗೆ ಆಟಿಯ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಣೆ ಮಾಡಲಾಯಿತು. ಆಟಿಯ ವಿಶೇಷ ಭೋಜನ ಕೂಟ ನಡೆಯಿತು. ಪ್ರತ್ಯಷ್ ಮಾಲಾಡಿ ಪ್ರಾರ್ಥನೆ ಹಾಡಿದರು. ಉಪನ್ಯಾಸಕಿ ಕಾವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಜಗನ್ನಾಥ ವಂದಿಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ