ಕುಖ್ಯಾತ ಪಾತಕಿಗಳಿಗೆ ಜೈಲಿನ ಸಿಬ್ಬಂದಿಗಳು ರಾಜಾತಿಥ್ಯ ನೀಡಿರುವುದು ನಾಚಿಕೆಗೇಡಿನ ಕೆಲಸ : ಕುಮಾರಸ್ವಾಮಿ

ಬೆಂಗಳೂರು : ನಗರದ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ವಿಶೇಷ ಸೌಲಭ್ಯ ನೀಡಿರುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

“ಬರೀ ಕಾರಾಗೃಹದಲ್ಲೇ ಯಾಕೆ, ಅದಕ್ಕಿಂತಲೂ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದ ಒಳಗೆಯೇ ಇದ್ದಾರೆ. ಪರಪ್ಪನ ಅಗ್ರಹಾರದಲ್ಲಿ ವಿಚಾರಣಾಧೀನ ಕೈದಿಗಳು ಮತ್ತು ಶಿಕ್ಷೆಗೆ ಗುರಿಯಾಗಿರುವ ಕುಖ್ಯಾತ ಪಾತಕಿಗಳಿಗೆ ಜೈಲಿನ ಸಿಬ್ಬಂದಿಗಳು ರಾಜಾತಿಥ್ಯ ನೀಡಿರುವುದು ನಾಚಿಕೆಗೇಡಿನ ಕೆಲಸ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಯೋತ್ಪಾದಕರು ಕೇವಲ ಕಾರಾಗೃಹದಲ್ಲಿ ಮಾತ್ರವಷ್ಟೇ ಇಲ್ಲ, ಅವರಿಗಿಂತ ಅಪಾಯಕಾರಿ ಭಯೋತ್ಪಾದಕರು ವಿಧಾನಸೌಧದಲ್ಲಿಯೂ ಇದ್ದಾರೆ, ಅವರು ಯಾರು ಎನ್ನುವುದು ನನಗಿಂತ ಹೆಚ್ಚಾಗಿ ನಿಮಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ರಾಜ್ಯದ ಜನತೆ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡುವುದು ಹಳೆಯ ವಿಚಾರವೇನೂ ಅಲ್ಲ. ಹಿಂದೆ, ಈ ವಿಚಾರಕ್ಕೆ ಸಂಬಂಧಿಸಿದಂತೆ, ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಕಿತ್ತಾಡಿಕೊಂಡಿದ್ದರು ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಸ್ವತಃ ನ್ಯಾಯಾಲಯವೇ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದ ಜೈಲು ಸಿಬ್ಬಂದಿಗೆ ಕಠಿಣ ಎಚ್ಚರಿಕೆಯನ್ನು ನೀಡಿತ್ತು. ಇಷ್ಟಾದರೂ, ಪರಪ್ಪನ ಅಗ್ರಹಾರದ ಸಿಬ್ಬಂದಿಗಳು ಸುಧಾರಿಸಿಕೊಳ್ಳದೇ, ಮತ್ತೆ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಈ ವಿಚಾರದಲ್ಲಿ ಯಾರ ಮೇಲೆ ಗೃಹ ಇಲಾಖೆ ತನಿಖೆಯನ್ನು ನಡೆಸುತ್ತದೆ. ಇದರ ಬಗ್ಗೆ ಮಾತನಾಡುವುದು ವೇಸ್ಟ್, ಸುಮ್ಮನೆ ಜನರ ದಾರಿಯನ್ನು ಬೇರೆಡೆಗೆ ಎಳೆಯಲು ತನಿಖೆ ಎಂದು ಹೇಳುತ್ತಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಜೈಲು ನಿರ್ವಹಣೆಯಲ್ಲಿ ಪದೆ ಪದೇ ನಡೆಯುತ್ತಿರುವ ವೈಫಲ್ಯಗಳ ಬಗ್ಗೆ ಮಾಧ್ಯಮಗಳು ಹಾಗೂ ಜನರು ಮುಖ್ಯಮಂತ್ರಿ, ಗೃಹ ಸಚಿವರನ್ನು ಕೇಳಬೇಕು, ಪ್ರಶ್ನಿಸಬೇಕು. ಪ್ರತಿ ದಿನವೂ ಈ ಸರ್ಕಾರದ ವೈಪಲ್ಯ ಎದ್ದು ಕಾಣಿಸುತ್ತಿದೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಹೇಳುತ್ತಾರೆ. ಆದರೆ ಇವರಿಗೇನಿದೆ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕಿದೆ” ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು. ಸಿಎಂ ಅವರಿಗೆ ಸುದೀರ್ಘ ರಾಜಕೀಯ ಅನುಭವ ಇದೆ. ಇಷ್ಟು ಅನುಭವ ಇಟ್ಟುಕೊಂಡು ಇಷ್ಟೆಲ್ಲಾ ಲಘುವಾಗಿ ತೆಗೆದುಕೊಳ್ಳುವುದು ಎಷ್ಟು ಸರಿ? ಮುಖ್ಯಮಂತ್ರಿಗಳಿಗೆ ಗುಪ್ತದಳ ಎನ್ನುವುದು ಇರುವುದಿಲ್ಲವೇ? ಇವರೇ ಕೆಟ್ಟ ಶಕ್ತಿಗಳಿಗೆ ಬೆಂಬಲ ಕೊಡುತ್ತಿದ್ದಾರೆ. ನಾನು, ಒತ್ತಾಯ ಮಾಡಿದಾಕ್ಷಣ ರಾಜೀನಾಮೆ ಕೊಡುವ ಕಾಲವೇ ಇದು? ಅಷ್ಟೊಂದು ನೈತಿಕತೆ ಯಾವ ರಾಜಕಾರಣಿಗಿದೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.