ಕುಂದಾಪುರ : ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು – ಭಯಾನಕ ದೃಶ್ಯ ಸಿಸಿಟಿವಿ’ಯಲ್ಲಿ ಸೆರೆ

ಕುಂದಾಪುರ, ಜೂ. 09 : ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಕೋಟೇಶ್ವರ-ಹಾಲಾಡಿ ರಸ್ತೆಯ ಅಂಡರ್‌ಪಾಸ್ ಸಮೀಪ ಸೋಮವಾರ ಸಂಜೆ ನಡೆದಿದೆ.

Advertisement

ಕೋಟೇಶ್ವರ ಮಾರ್ಕೋಡು ನಿವಾಸಿ ಪ್ರದೀಪ್ ಪೂಜಾರಿ (35) ಮೃತ ಯುವಕ. ಇವರು ಗಾರೆ ಕೆಲಸ ಮಾಡಿಕೊಂಡಿದ್ದರು.

ಘಟನೆ ವಿವರ : ಉಡುಪಿ ಕಡೆಯಿಂದ ಬಂದು ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮೂಲಕ ಅಂಡರ್‌ಪಾಸ್‌ನಲ್ಲಿ ಬೃಹತ್ ಕಂಟೇನರ್ ಲಾರಿಯೊಂದು ಯು-ಟರ್ನ್ ಪಡೆಯಲು ಮುಂದಕ್ಕೆ ಸಾಗುವಾಗ ಪೇಟೆ ಕಡೆಯಿಂದ ಹಾಲಾಡಿ ರಸ್ತೆಗೆ ತೆರಳುತ್ತಿದ್ದ ಬೈಕ್‌‌ಗೆ ಡಿಕ್ಕಿ ಹೊಡೆದಿದ್ದು ಬೈಕ್ ಸಹಿತ ಕೆಳಕ್ಕೆ ಬಿದ್ದ ಪ್ರದೀಪ್ ಪೂಜಾರಿಯವರ ಮೇಲೆ ಲಾರಿ ಹತ್ತಿದ್ದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರಿ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಅನೂಪ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.