ಕುಂದಾಪುರ : ಭಾರೀ ಅಗ್ನಿ ಅವಘಡ – ಸಂಪೂರ್ಣ ಸುಟ್ಟು ಕರಕಲಾದ ದಿನಸಿ ಅಂಗಡಿ !

Advertisement

ಕುಂದಾಪುರ, ಆ. 04 : ಭಾರೀ ಅಗ್ನಿ ಅವಘಡದಿಂದಾಗಿ ಇಡೀ ದಿನಸಿ ಅಂಗಡಿ ಸುಟ್ಟು ಭಸ್ಮವಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ಶ್ರೀ ಬ್ರಹ್ಮಸ್ಥಾನ ಸಮೀಪದ ಗುರು ಬ್ರಹ್ಮ ಜನರಲ್ ಸ್ಟೋರ್ ನಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ.

Advertisement

ಮಂಗಳವಾರ ಮುಂಜಾನೆ ಸುಮಾರು 1.30 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ಸಂತೋಷ್ ಅವರು ಎಂದಿನಂತೆ ಅಂಗಡಿ ಮುಚ್ಚಿ ಮನೆಗೆ ತೆರಳಿದ ಬಳಿಕ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.

Advertisement

ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ದಿನಸಿ ಸಾಮಗ್ರಿಗಳು, ಫ್ರಿಜ್‌ಗಳು, ಪೀಠೋಪಕರಣಗಳು ಸೇರಿದಂತೆ ಅಂಗಡಿಯಲ್ಲಿದ್ದ ಬಹುತೇಕ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಅಗ್ನಿ ಅವಘಡದಿಂದ 40 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅಂಗಡಿಯಲ್ಲಿದ್ದ ಮೂರುಕ್ಕೂ ಹೆಚ್ಚು ಫ್ರಿಜ್‌ಗಳಲ್ಲಿ ಒಂದರಲ್ಲಿ ಸಂಭವಿಸಿದ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಂದಾಪುರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗ್ನಿ ನಂದಿಸುವ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ