ಕುಂದಾಪುರ: ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

Advertisement

ಕುಂದಾಪುರ, ಫೆ. 26 : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದು ಕುಂದಾಪುರ ಮತ್ತು ಗಂಗೊಳ್ಳಿ ನಡುವಿನ ಸಮುದ್ರದಲ್ಲಿ ನೀರು ತುಂಬಿ ಮುಳುಗಡೆಯಾಗಿದೆ. ಈ ಬೋಟ್‌ನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟ್‌ನ ಮೀನುಗಾರರು ರಕ್ಷಿಸಿದ್ದಾರೆ.

Advertisement

ಬೋಟ್‌ನಲ್ಲಿದ್ದ ಕುಮಟಾ ಮೂಲದ ಪ್ರಕಾಶ್, ರಂಜಿತ್, ರಾಘವೇಂದ್ರ, ರಾಮ ಮತ್ತು ಶ್ರೀನಿವಾಸ ರಕ್ಷಿಸಲ್ಪಟ್ಟ ಮೀನುಗಾರರು. ಕೆಮ್ಮಣ್ಣು ನಿವಾಸಿ ನಾಗರಾಜ್ ಪುತ್ರನ್ ಅವರಿಗೆ ಸೇರಿದ ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಬೋಟ್ ಫೆಬ್ರವರಿ 23ರ ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ಫೆಬ್ರವರಿ 24ರಂದು ಸಮುದ್ರದಲ್ಲಿ ಯಾವುದೋ ವಸ್ತು ಬೋಟ್‌ನ ಕೆಳಭಾಗಕ್ಕೆ ತಾಗಿದ ಪರಿಣಾಮ, ಇಂಜಿನ್ ಅಡಿ ಭಾಗದಲ್ಲಿ ನೀರು ನುಗ್ಗಲು ಆರಂಭಿಸಿದೆ. ಪರಿಣಾಮ ಇಂಜಿನ್ ಸ್ಥಗಿತಗೊಂಡಿದೆ.

Advertisement

ಕೂಡಲೇ ಮೀನುಗಾರರು ಬೋಟಿನಿಂದ ನೀರನ್ನು ಖಾಲಿ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ತಕ್ಷಣವೇ ಮಲ್ಪೆಯ ಶ್ರೀ ಕೃಷ್ಣ ಬೋಟ್‌ನ ಮೀನುಗಾರರು ಮತ್ತು ಕರಾವಳಿ ಕಾವಲು ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಐವರು ಮೀನುಗಾರರನ್ನು ರಕ್ಷಿಸಿದರು. ಬಳಿಕ ಶ್ರೀ ಕೃಷ್ಣ ಬೋಟ್ ಮೂಲಕ ಮುಳುಗುತ್ತಿದ್ದ ಬೋಟ್ ಅನ್ನು ಹಗ್ಗದಿಂದ ಕಟ್ಟಿ ಗಂಗೊಳ್ಳಿ ಬಂದರಿನತ್ತ ಸುಮಾರು 8-9 ನಾಟಿಕಲ್ ಮೈಲಿ ಎಳೆದುಕೊಂಡು ಬರಲಾಗುತ್ತಿತ್ತು. ಆದರೆ, ಸಮುದ್ರದಲ್ಲಿ ಬೀಸುತ್ತಿದ್ದ ಬಲವಾದ ಗಾಳಿ ಮತ್ತು ಅಲೆಗಳ ಆರ್ಭಟಕ್ಕೆ ಹಗ್ಗ ತುಂಡಾಗಿ ಬೋಟ್ ಸಂಪೂರ್ಣ ಮುಳುಗಡೆಯಾಗಿದೆ.

ಈ ಘಟನೆಯಿಂದ ಸುಮಾರು 60 ರಿಂದ 65 ಲಕ್ಷ ರೂಪಾಯಿ ನಷ್ಟ ಸಂಭವಿಸಿದೆ ಎಂದು ಬೋಟ್ ಮಾಲೀಕ ನಾಗರಾಜ್ ಪುತ್ರನ್ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಗಂಗೊಳ್ಳಿ ಕರಾವಳಿ ಭದ್ರತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ