ಕುಪ್ಪೆಟ್ಟಿ ಉಪ್ಪಿನಂಗಡಿ ರಸ್ತೆಗೆ ಶಾಸಕ ಪೂಂಜಾರಿಂದ ರೂ.42 ಲಕ್ಷ ಅನುದಾನದ ಕಾಮಗಾರಿಗೆ ಚಾಲನೆ – ಸಂಪೂರ್ಣ ಕಾಮಗಾರಿಗೆ ರೂ.12.00ಕೋ. ಮೀಸಲು

ಬೆಳ್ತಂಗಡಿ, ಡಿ. 19 : ರಾಜ್ಯ ಹೆದ್ದಾರಿ 118ರ ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಪರ್ಕ ರಸ್ತೆಯ ನಿರ್ವಹಣೆ ಕಾಮಗಾರಿಗಾಗಿ ಪ್ರಸ್ತುತ ರೂ.42 ಲಕ್ಷ ಅನುದಾನವನ್ನು ಶಾಸಕರಾದ ಹರೀಶ್ ಪೂಂಜಾರವರು ನಿಗದಿಪಡಿಸಿದ್ದಾರೆ. ಕುಪ್ಪೆಟ್ಟಿ ಮತ್ತು ಕರಾಯ ಭಾಗದಲ್ಲಿ ಸಂಪೂರ್ಣವಾಗಿ ನಾಶವಾಗಿರುವ ರಸ್ತೆಯ ಭಾಗವನ್ನು ಪುನ‌ರ್ ನಿರ್ಮಾಣ ಮಾಡುವ ಕಾರ್ಯಕ್ಕೆ ಹಾಗೂ ಉಳಿದೆಡೆ ದೊಡ್ಡ ದೊಡ್ಡ ಹೊಂಡಗಳನ್ನು ಮುಚ್ಚುವ ಕಾರ್ಯಕ್ಕೆ ಮಾತ್ರವೇ ಅನುದಾನ ಸೀಮಿತಗೊಂಡಿದೆ.

Advertisement

ಇದನ್ನು ಜೆಡಿ ಸುವರ್ಣ ಸಂಸ್ಥೆಯ ಗುತ್ತಿಗೆದಾರರಿಂದ ನಿರ್ವಹಣೆ ಕಾರ್ಯವನ್ನು ಕೈಗೊಳ್ಳಲಿದ್ದು ಪ್ರಸ್ತುತ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಸದ್ರಿ ರಸ್ತೆ ಕಾರ್ಯವು ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಪೂರ್ಣವಾಗಿ ಸಹಕಾರ ನೀಡುವಂತೆ ಶಾಸಕ ಹರೀಶ್ ಪೂಂಜಾರವರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ.

ಶಾಸಕ ನಿಧಿಯ ಸಂಪೂರ್ಣ ರೂ.12.00ಕೋಟಿ ರಸ್ತೆ ಅಭಿವೃದ್ಧಿಗೆ ಮೀಸಲು :

ಮುಂದಿನ ದಿನಗಳಲ್ಲಿ ಲೋಕೋಪಯೋಗಿ ಇಲಾಖೆಯ SHDP ಯೋಜನೆಯಡಿ ವಾರ್ಷಿಕವಾಗಿ ಶಾಸಕರುಗಳಿಗೆ ಲಭ್ಯವಾಗುವ ರೂ.12.00ಕೋಟಿ ಅನುದಾನದಲ್ಲಿ ಸಂಪೂರ್ಣ ರೂ.12.00ಕೋಟಿ ಮೊತ್ತವನ್ನು ಕೂಡ ಆದ್ಯತೆಯ ಮೇರೆಗೆ ಇದೇ ರಸ್ತೆಗೆ ಕುಪ್ಪೆಟ್ಟಿ- ಉಪ್ಪಿನಂಗಡಿ ರಸ್ತೆಯನ್ನು ಪುನರ್ ನಿರ್ಮಾಣ ಮಾಡಲು ಈಗಾಗಲೇ ಮಾನ್ಯ ಶಾಸಕರು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿದ್ದಾರೆ. ಅದರಂತೆ ಮುಂದಿನ ದಿನಗಳಲ್ಲಿ ಕಾಮಗಾರಿಗೆ ಆಡಳಿತಾತ್ಮಕ ಹಾಗೂ ಆರ್ಥಿಕ ಮಂಜೂರಾತಿ ದೊರೆತ ತಕ್ಷಣವೇ ಟೆಂಡ‌ರ್ ಪ್ರಕ್ರಿಯೆಗಳನ್ನು ಮುಗಿಸಿ ಸುಸಜ್ಜಿತ ರಸ್ತೆಯು ನಿರ್ಮಾಣಗೊಳ್ಳಲಿದೆ ಎಂದು ಶಾಸಕರ ಕಚೇರಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ಬಹುಬೇಡಿಕೆಯ ರಸ್ತೆ – ಸರ್ಕಾರದಿಂದ ನಿರ್ಲಕ್ಷ್ಯ…?

ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆಯು ಕಳೆದ ಮಳೆಗಾಲದ ಸಮಯದಲ್ಲಿ ಸಂಪೂರ್ಣವಾಗಿ ಹಾನಿಗೊಂಡಿದ್ದು, ಸಾರ್ವಜನಿಕರು ವ್ಯಾಪಕವಾಗಿ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಈ ರಸ್ತೆ ನಿರ್ಮಾಣಕ್ಕಾಗಿ ಶಾಸಕರ ನೇತೃತ್ವದಲ್ಲಿ ಕುಪ್ಪೆಟ್ಟಿಯಲ್ಲಿ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಅಲ್ಲದೆ, ಅನುದಾನ ಒದಗಿಸುವಂತೆ ಶಾಸಕ ಹರೀಶ್ ಪೂಂಜಾರವರು ಅಧಿವೇಶನದಲ್ಲಿ ಧ್ವನಿಯೆತ್ತಿದ್ದರು. ಆದರೆ, ಈವರೆಗೆ ಈ ರಸ್ತೆಯ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗೊಡೆಗೊಳಿಸಿಲ್ಲ ಎಂಬ ಆರೋಪ ಇದೆ. ಇದೀಗ ಶಾಸಕ ಹರೀಶ್ ಪೂಂಜಾರವರು ಮೊದಲ ಹಂತದ ಕಾಮಗಾರಿಗಾಗಿ ಪ್ರಸ್ತುತ ರೂ.42 ಲಕ್ಷ ಅನುದಾನವನ್ನು ನೀಡಿದ್ದು, ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ ರೂ.12 ಕೋಟಿ ಮೊತ್ತವನ್ನು ಆದ್ಯತೆಯ ಮೇರೆಗೆ ಇದೇ ರಸ್ತೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆಡಳಿತಾತ್ಮಕ ಹಾಗೂ ಆರ್ಥಿಕ ಮಂಜೂರಾತಿ ದೊರೆತ ತಕ್ಷಣ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಶಾಸಕರು ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವೂ ಕೂಡಾ ಈ ರಸ್ತೆಯ ನಿರ್ಮಾಣಕ್ಕೆ ಆದ್ಯತೆಯ ಮೇರೆಗೆ ಆದಷ್ಟು ಶೀಘ್ರವಾಗಿ ಒಪ್ಪಿಗೆ ನೀಡಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.