ಬೆಳ್ತಂಗಡಿ, ಜು. 20 : ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾಯಿಲ ಪ್ರಸನ್ನ ಕಾಲೇಜು ಸಮೀಪ ನಡೆದಿದೆ.
ಗಾಯಾಳು ಬೈಕ್ ಸವಾರನನ್ನು ಕನ್ಯಾಡಿ ನಿವಾಸಿ ಅಭಿ ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಸವಾರನನ್ನು ಸ್ಥಳೀಯರು ತಕ್ಷಣವೇ ಆಂಬುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


