ಕಲಬುರಗಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Advertisement

ಕಲಬುರಗಿ, ಜು. 4 : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು 50 ಸಾವಿರ ರೂ.ದಂಡ ವಿಧಿಸಿ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ.

Advertisement

ಚಿಂಚೋಳಿ ತಾಲೂಕಿನ ಗ್ರಾಮವೊಂದರ ನಿವಾಸಿ ನಂದಪ್ಪ ತಂದೆ ಮಹಾದೇವ ಕಟ್ಟಿಮನಿ (30) ಶಿಕ್ಷೆಗೆ ಗುರಿಯಾದ ಅಪರಾಧಿ. ಮಿರಿಯಾಣ ಪೊಲೀಸ್‌ ಠಾಣೆ ವ್ಯಾಪ್ತಿಯ 17 ವರ್ಷದ ಅಪ್ರಾಪ್ತ ಪುತ್ರಿಯನ್ನು ಪ್ರೀತಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ.

Advertisement

ಇದು ಸಾಬೀತಾದ ಹಿನ್ನೆಲೆಯಲ್ಲಿಅಪರ ಜಿಲ್ಲಾ ಮತ್ತು ಸತ್ರ (ವಿಶೇಷ ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಎಸ್‌.ಎಲ್ ಚವ್ಹಾಣ ಅವರು ಪೋಕ್ಸೊ ಕಾಯಿದೆ ಕಲಂ 6ರ ಅಡಿಯಲ್ಲಿಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ಹಾಗೂ ಬಿಎನ್‌ಎಸ್‌ ಕಲಂ 333(ಬಿ) ಅಡಿಯಲ್ಲಿ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ ರೂ. ದಂಡ ವಿಧಿಸಿ ಅದೇಶಿಸಲಾಗಿದೆ.

ಅಲ್ಲದೆ, ನೊಂದ ಅಪ್ರಾಪ್ತೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 5 ಲಕ್ಷ ರೂ. ಪರಿಹಾರ ಒಂದು ತಿಂಗಳೊಳಗೆ ನೀಡುವಂತೆ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ವಾದ ಮಂಡಿಸಿದ್ದರು. ತನಿಖಾಧಿಕಾರಿ ಪಿಎಸ್‌ಐ ಮಡಿವಾಳಪ್ಪ ಹಾಗೂ ಸಿಪಿಐ ಕಪಿಲದೇವ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು.

ಮಿರಿಯಾಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿಕೂಲಿ ಕಾರ್ಮಿಕ ದಂಪತಿಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಪುಸಲಾಯಿಸಿ, 2025ರ ಫೆ.14ರ ರಾತ್ರಿ ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿಕೊಂಡು ಹೋಗಿದ್ದನು. ನಂತರ ಆಕೆಯ ಇಚ್ಛೆಗೆ ವಿರುದ್ಧವಾಗಿ ಆರೋಪಿ ಮೂರರಿಂದ ನಾಲ್ಕು ಬಾರಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತು ಮಿರಿಯಾಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅತ್ಯಾಚಾರ ಪ್ರಕರಣಳಲ್ಲಿ ತನಿಖೆ ವಿಳಂಬ ಹಾಗೂ ಶಿಕ್ಷೆಯ ಪ್ರಮಾಣ ಕಡಿಮೆ ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲಿ ನ್ಯಾಯಾಲಯ ಅಪರಾಧಿಗೆ 20 ವರ್ಷಗಳ ಕಾಲ ಶಿಕ್ಷೆ ವಿಧಿಸಿದ್ದು ಮಹತ್ವ ಪಡೆದುಕೊಂಡಿದೆ. ನ್ಯಾಯಾಲಯದ ಈ ತೀರ್ಪು ಸಂತ್ರಸ್ತ ಕುಟುಂಬಗಳಲ್ಲೂ ನ್ಯಾಯದ ಬಗ್ಗೆ ನಿರೀಕ್ಷೆ ಮೂಡಿಸುವಂತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ