ಬೆಂಗಳೂರು : ಮದ್ಯದ ಅಮಲಿನಲ್ಲಿ ಸಂಚಾರ – ಪೊಲೀಸರಿಗೆ ಸಿಕ್ಕಿಬಿದ್ದ ಲಾರಿ ಚಾಲಕ ಅದೇ ಲಾರಿಯಲ್ಲಿ ನೇಣಿಗೆ ಶರಣು

ಬೆಂಗಳೂರು, ಏ. 06 : ಮದ್ಯದ ಅಮಲಿನಲ್ಲಿ ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದ ಲಾರಿ ಚಾಲಕನ್ನೊಬ್ಬ, ಮರು ದಿನ ಬೆಳಗ್ಗೆ ಅದೇ ಲಾರಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಷಣ್ಮುಗಂ (26) ಮೃತ ಚಾಲಕ. ಭಾನುವಾರ ಮುಂಜಾನೆ ಜೆ.ಪಿ.ನಗರದ 22ನೇ ಮುಖ್ಯರಸ್ತೆ ಸಮೀಪದ ಹೊರವರ್ತುಲ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಜೆ.ಪಿ.ನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಜೆ.ಪಿ.ನಗರ ಸಮೀಪದ ಹೊರವರ್ತುಲ ರಸ್ತೆಯಲ್ಲಿ ಸಂಚಾರ ಪೊಲೀಸರು ಡಿಡಿ ಪ್ರಕರಣದ ಪರಿಶೀಲಿಸುತ್ತಿದ್ದರು. ಈ ವೇಳೆ ಮದ್ಯ ಸೇವಿಸಿ ಲಾರಿ ಚಾಲನೆ ಮಾಡಿಕೊಂಡು ಬಂದ ಷಣ್ಮುಗಂನನ್ನು ಪರಿಶೀಲಿಸಲಾಗಿದ್ದು, ಮದ್ಯ ಸೇವಿಸಿರುವುದು ಪತ್ತೆಯಾಗಿದ್ದರಿಂದ ಆತನಿಗೆ ನೋಟಿಸ್ ಕೊಡಲಾಗಿತ್ತು. ಅಲ್ಲದೆ, ಠಾಣೆಯ 100 ಮೀಟ‌ರ್ ದೂರದಲ್ಲೇ ಲಾರಿಯನ್ನು ನಿಲ್ಲಿಸಲಾಗಿತ್ತು. ಆದರೆ, ಭಾನುವಾರ ಮುಂಜಾನೆ ಅದೇ ಲಾರಿಯಲ್ಲಿ ಷಣ್ಮುಗಂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಆತ್ಮಹತ್ಯೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಜೆ.ಪಿ.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಬಗ್ಗೆ ತಮಿಳುನಾಡಿನಲ್ಲಿರುವ ಮೃತನ ಪೋಷಕರಿಗೆ ವಿಷಯ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ.ಜಗಲಾಸರ್‌, ಪರಿಶೀಲನೆ ವೇಳೆ ಷಣ್ಮುಗಂ ಕುಡಿದು ವಾಹನ ಚಾಲನೆ ಮಾಡುತ್ತಿರುವುದು ಪತ್ತೆಯಾಗಿದೆ. ಆತನೊಂದಿಗೆ ಮಾತನಾಡಿರುವ ಎಲ್ಲ ಸನ್ನಿವೇಶಗಳು ಪೊಲೀಸ್‌ ಸಿಬ್ಬಂದಿ ಬಾಡಿವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದರೆ, ಭಾನುವಾರ ಬೆಳಗ್ಗೆ ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಅದರಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.