ಬೆಳ್ತಂಗಡಿ : ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳನ್ನು ಭೇಟಿಯಾದ ವಕೀಲರ ಸಂಘ ನಿಯೋಗ

ಬೆಳ್ತಂಗಡಿ, ಮೇ 23 : ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಆರ್ಥಿಕ ಬಿಡ್ ಗೆ ಸರಕಾರ ಈಗಾಗಲೇ ಅನುಮೋದನೆ ನೀಡಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಮೇ.23 ರಂದು ಬೆಂಗಳೂರಿನ ನ್ಯಾಯಗ್ರಾಮದಲ್ಲಿರುವ ವಸತಿ ಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಎಚ್ ಟಿ ನರೇಂದ್ರಪ್ರಸಾದ್ ರವರನ್ನು ಬೇಟಿ ಮಾಡಿ ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದರು.

Advertisement

ಇದೇ ಸಂದರ್ಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರನ್ನು ಭೇಟಿ ಮಾಡಿ ಶಂಕು ಸ್ಥಾಪನೆ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ, ಉಪಾಧ್ಯಕ್ಷ ಶ್ರೀನಿವಾಸ ಗೌಡ, ಹಿರಿಯ ಸಮಿತಿ ಅಧ್ಯಕ್ಷ ಶಿವ ಕುಮಾರ್ ಎಸ್ ಎಂ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಎ ಮತ್ತು ಮಾಜಿ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.