ಮೊದಲ ಹೆಂಡತಿ ಜೊತೆ ಡಿವೋರ್ಸ್, ಅಕ್ಕನ ಜೊತೆ ಲವ್, ತಂಗಿಯ ರೇಪ್ – ವಿಕೃತ ಕಾಮಿ ಅಂದರ್ !

ನೆಲಮಂಗಲ, ಡಿ. 28 : ಮೊದಲ ಹೆಂಡತಿ ಇದ್ದರೂ ಮತ್ತೋಬ್ಬಾಕೆಯ ಜೊತೆ ಲಿವಿನ್ ರಿಲೇನ್ಶಿಪ್ ಮಾಡಿಕೊಂಡು, ತನ್ನ ಪ್ರೇಯಸಿಯ ತಂಗಿಯನ್ನು ಬ್ಲ್ಯಾಕ್ಮೇಲ್ ಮಾಡಿ ಅತ್ಯಾಚಾರವೆಸಗುತ್ತಿದ್ದ ರಾಕ್ಷಸೀ ಮನೋವೃತ್ತಿಯ ಯುವಕನೋರ್ವ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, ಈತನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಇಡೀ ಸಮಾಜವೇ ವಿನಂತಿಸಿದೆ. ಸಂತ್ರಸ್ತ ಯುವತಿಯಿಂದ ಲಕ್ಷಾಂತರ ಹಣ ಬೆದರಿಸಿ ಪಡೆದಿರುವ ಜೊತೆಗೆ, ಆಕೆಯ ಮನೆಯಲ್ಲಿದ್ದ ಚಿನ್ನಾಭರಣವನ್ನು ಆರೋಪಿ ಕದ್ದಿದ್ದ. ಅಲ್ಲದೆ, ಯುವತಿಯ ಸಹೋದರಿ ಮೇಲೂ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದ ಎನ್ನಲಾಗಿದೆ.

Advertisement

ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶುಭಾಂಶು ಶುಕ್ಲಾ(27) ಎಂಬಾತನೇ ಈ ಪ್ರಕರಣದ ಆರೋಪಿ. ಮೊದಲು ಸಂತ್ರಸ್ತೆಯ ಸಹೋದರಿಯಾದ ಅಪ್ರಾಪ್ತೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಯ ಕುಟುಂಬಕ್ಕೂ ಬಲ್ಲವನಾಗಿದ್ದ. ಬಳಿಕ ಬಾಲಕಿ ಸಹೋದರಿಯನ್ನ ಪ್ರೀತಿ ಬಲೆಯಲ್ಲಿ ಬೀಳಿಸಿದ್ದ ಈತ, ಮಾಸ್ಟರ್​​ ಪ್ಲ್ಯಾನ್​​ ಮಾಡಿ ಆಕೆಯನ್ನು ತನ್ನ ಜೊತೆ ಕರೆದುಕೊಂಡು ಹೋಗಿದ್ದ. ತನಗೆ ಮುಂಬೈನಲ್ಲಿ ಕೆಲಸ ಸಿಕ್ಕಿದೆ ಎಂದು ಮನೆಯವರನ್ನು ನಂಬಿಸಿದ್ದ ಸಂತ್ರಸ್ತೆ, ಈತನನನ್ನು ನಂಬಿ ಜೊತೆಗೆ ತೆರಳಿದ್ದಳು. ನಂತರ ಫ್ಲ್ಯಾಟ್​ನಲ್ಲಿ ಶುಭಾಂಶು ಮತ್ತು ಯುವತಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದರು ಎನ್ನಲಾಗಿದೆ.

ಇನ್ನು ಸಮಯ ಕಳೆದಂತೆ ಶುಭಾಂಶುಗೆ ಮೊದಲೇ ಮದುವೆಯಾಗಿರುವ ಬಗ್ಗೆ ಸಂತ್ರಸ್ತೆಗೆ ಗೊತ್ತಾಗಿದೆ. ಈ ಬಗ್ಗೆ ವಿಚಾರಿಸಿದಾಗ ಆಕೆಯ ಜೊತೆ ತಾನು ವಿಚ್ಛೇದನ ಪಡೆದುಕೊಳ್ಳುತ್ತೇನೆ. ನಿನ್ನ ಮದುವೆಯಾಗಿ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಆತ ಹೇಳಿದ್ದ. ಶುಭಾಂಶು ಪತ್ನಿಯೂ ಸಂತ್ರಸ್ತೆ ಜೊತೆ ಮಾತಾಡಿದ್ದು ತಾನು ಆತನಿಗೆ ಡಿವೋರ್ಸ್​​ ನೀಡೋದಾಗಿ ತಿಳಿಸಿದ್ದಳು. ಹೀಗಾಗಿ ಶುಭಾಂಶು ಮೇಲೆ ಭರವಸೆ ಇಟ್ಟು ಸಂತ್ರಸ್ತೆ ಸಂಬಂಧ ಮುಂದುವರಿಸಿದ್ದಳು. ಆದರೆ, ಮತ್ತೊಂದು ಅಪ್ರಾಪ್ತ ಯುವತಿಗೂ ಶುಭಾಂಶು ಇದೇ ರೀತಿ ವಂಚಿಸುತ್ತಿರೋದು ಸಂತ್ರಸ್ತೆಗೆ ಗೊತ್ತಾಗಿದೆ. ಆಕೆ ಮುಂದೆ ಈತನ ಬಂಡವಾಳವನ್ನು ಸಂತ್ರಸ್ತೆ ಬಯಲು ಮಾಡಿದ್ದಳು. ಆ ಬಳಿಕ ಶುಭಾಂಶು ಚಿತ್ರಹಿಂಸೆ ಆರಂಭವಾಗಿತ್ತು ಎಂದು ದೂರಲಾಗಿದೆ.

ಸಂತ್ರಸ್ತ ಯುವತಿ ಬಳಿ 37 ಲಕ್ಷ ಹಣವನ್ನೂ ಪಡೆದಿದ್ದ ಆರೋಪಿ ಶುಭಾಂಶು, ಯುವತಿ ಮನೆಯಲ್ಲಿ 559 ಗ್ರಾಂ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಆ ಬಳಿಕ ಸಂತ್ರಸ್ತೆ ಚಿತ್ರಹಿಂಸೆ ತಾಳಲಾರದೆ ಶುಭಾಂಶುನನ್ನು ಬಿಟ್ಟು ಬಂದಿದ್ದಳು. ಸಂತ್ರಸ್ತೆಯ ಪರಿಚಯಕ್ಕೆ ಮೂಲ ಕಾರಣವಾಗಿದ್ದ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಶುಭಾಂಶು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಗ್ರೂಪ್​​ ಸ್ಟಡಿ ಮಾಡಲು ತೆರಳುತ್ತಿದ್ದಾಗ ಪರಿಚಯವಾಗಿದ್ದ ಶುಭಾಂಶು, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಎಂದು ಬೆದರಿಸಿದ್ದ ಆತ, ನಿನ್ನ ಮನೆಯವರನ್ನು ನನಗೆ ಪರಿಚಯ ಮಾಡಿಸು ಎಂದಿದ್ದ. ಹಾಗಾದರೆ ಮಾತ್ರ ತಾನು ನಿನ್ನ ಬಿಡೋದಾಗಿ ಹೆದರಿಸಿದ್ದ ಎಂದು ಅಪ್ರಾಪ್ತೆಯೂ ದೂರಿದ್ದಾಳೆ.

ಮೂವರು ಹೆಣ್ಣು ಮಕ್ಕಳನ್ನು ತನ್ನ ಕಾಮದಾಹಕ್ಕೆ ಬಳಸಿಕೊಂಡಿದ್ದಲ್ಲದೇ, ಅವರದ್ದೇ ಚಿನ್ನಾಭರಣಗಳನ್ನು ಕದ್ದು, ಬ್ಲ್ಯಾಕ್ಮೇಲ್ ಮೂಲಕ ಹಣ ಪೀಕಿಸುತ್ತಿದ್ದ ಈತನ ಮೇಲೆ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ ಎಂದು ಯುವತಿಯರ ಮನೆಯವರು ಆಗ್ರಹಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.