ಕಾರ್ಕಳ : ಮಾಳ ಘಾಟ್‌ನಲ್ಲಿ ರಸ್ತೆ ಮೇಲೆ ಡೀಸೆಲ್ ಸೋರಿಕೆ – ಸರಣಿ ಅಪಘಾತ !

Advertisement

ಕಾರ್ಕಳ, ಜು. 20 : ಟಿಪ್ಪರ್ ಗೆ ಕಾರು ಢಿಕ್ಕಿ ಹೊಡೆದು ರಸ್ತೆಯ ಮೇಲೆ ಡೀಸೆಲ್ ಸೋರಿಕೆಯಾಗಿ ಸರಣಿ ಅಪಘಾತ ನಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-169ರ ಚಿಕ್ಕಮಗಳೂರು-ಉಡುಪಿ ಗಡಿಭಾಗದ ಮಾಳ ಘಾಟ್‌ನಲ್ಲಿ ಇಂದು (ಜು.20) ನಡೆದಿದೆ.

Advertisement

ರಸ್ತೆಯ ಮೇಲೆ ಡೀಸೆಲ್ ಚೆಲ್ಲಿದ ಪರಿಣಾಮವಾಗಿ ರಸ್ತೆ ಸಂಪೂರ್ಣವಾಗಿ ಜಾರುತ್ತಿತ್ತು. ಪರಿಣಾಮವಾಗಿ ಹಿಂದಿನಿಂದ ಬಂದ ಎರಡು ಕಾರುಗಳು ನಿಯಂತ್ರಣ ಕಳೆದುಕೊಂಡು ಪರಸ್ಪರ ಡಿಕ್ಕಿ ಹೊಡೆದಿದ್ದು, ಒಂದು ಕಾರು ಪಲ್ಟಿಯಾಗಿದೆ. ಅಪಘಾತದಲ್ಲಿ ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.

Advertisement

ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಮಾಹಿತಿ ಪಡೆದ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆ ಮೇಲೆ ಮರಳು ಹಾಕಿ ಡೀಸೆಲ್ ತೆರವುಗೊಳಿಸಿ, ಸಂಚಾರವನ್ನು ಸುಗಮಗೊಳಿಸಿದರು. ನಿರಂತರ ಮಳೆಯಿಂದ ಘಾಟ್ ರಸ್ತೆಗಳು ಜಾರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಹಾಗೂ ವೇಗ ನಿಯಂತ್ರಿಸಿಕೊಂಡು ಸಂಚರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ