ಮಂಗಳೂರು : ಮಗಳಿಂದಲೇ ತಾಯಿಯ ಮೇಲೆ ಮನಸೋ ಇಚ್ಛೆ ಹಲ್ಲೆ ಪ್ರಕರಣ – ಕೊನೆಗೂ ದೂರು ದಾಖಲು

ಮಂಗಳೂರು, ಡಿ. 02 : ಮೂಡುಶೆಡ್ಡೆ ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗದಲ್ಲಿ ಮಗಳೇ ತನ್ನ ತಾಯಿಗೆ ಸಾರ್ವಜನಿಕರ ಎದುರೇ ಮನಬಂದಂತೆ ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ, ಮಹಿಳಾ ರಕ್ಷಣಾ ವೇದಿಕೆ ಮಧ್ಯ ಪ್ರವೇಶಿಸಿ ಮಗಳು ನೇತ್ರಾವತಿ ವಿರುದ್ಧ ತಾಯಿಯ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ದೂರು ದಾಖಲಿಸಿದೆ.

Advertisement

ಹಿರಿಯ ನಾಗರಿಕರಾದ ನಿರ್ಮಲಾ ಅವರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ದೂರನ್ನು ದಾಖಲಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕಿ ರಮಿತಾ ಸೂರ್ಯವಂಶಿ ಹಾಗೂ ಹಿಂದೂ ಜಾಗರಣ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ದೀಕ್ಷಿತ್ ಉಪಸ್ಥಿತರಿದ್ದರು. ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ದೂರು ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೂ ಆಗ್ರಹಿಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.