ಉಡುಪಿ : ವಿಧಿಯ ಕ್ರೂರ ಆಟ ! ಅಮ್ಮನ ಕಂಕುಳಲ್ಲಿದ್ದ ಕಂದಮ್ಮನ ತಲೆಗೆ ಬಿದ್ದ ತೆಂಗಿನಕಾಯಿ – ಒಂದೂವರೆ ವರ್ಷದ ಮಗು ದಾರುಣ ಸಾವು

ಉಡುಪಿ, ಜೂ. 11 : ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ.

Advertisement

ಮೃತ ಬಾಲಕನನ್ನು ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರ ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ.

ಮಾಹಿತಿಗಳ ಪ್ರಕಾರ ಮಂಗಳವಾರ ಬೆಳಿಗ್ಗೆ ಸುಮಾರು 8.15 ಗಂಟೆಯ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಗಳು ದಿಯಾಳನ್ನು ಶಾಲಾ ಬಸ್ಸಿಗೆ ಕಳುಹಿಸಲು ಸುಚಿತ್ರ ಪೂಜಾರಿ ಅವರು ಮಗನನ್ನು ಕೈಯಲ್ಲಿ ಎತ್ತಿಕೊಂಡು ಮನೆಯಿಂದ ಹೊರಟಿದ್ದರು. ಈ ವೇಳೆ ರಸ್ತೆಯ ಬದಿಯಲ್ಲಿದ್ದ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ತೆಂಗಿನಕಾಯಿ ಕೆಳಗೆ ಬಿದ್ದು ದಕ್ಷ್ ತಲೆಗೆ ಬಡಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆಯನ್ನೂ ನಡೆಸಿದ್ದರೂ, ತಲೆಯ ಮೆದುಳಿಗೆ ತೀವ್ರ ಪೆಟ್ಟಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ದಕ್ಸ್ ಗೆ ದಿಯಾ (6) ಎಂಬ ಅಕ್ಕ ಇದ್ದು, ಆಕೆ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಪ್ರಶಾಂತ್ ಪೂಜಾರಿ ಅವರು ಕಳೆದ ಸುಮಾರು 13 ವರ್ಷಗಳಿಂದ ಬ್ರಹ್ಮಾವರ ಗಾಂಧಿ ಮೈದಾನದ ಸಮೀಪ ಸಣ್ಣ ಗಾಡಿಯಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದು, ಕುಟುಂಬ ಜೀವನ ಸಾಗಿಸುತ್ತಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.