ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿಯ ಗಡಿಪಾರು ನಡೆಯುತ್ತಾ ?- ಭವಿಷ್ಯ ಇಂದು ನಿರ್ಧಾರ

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮ ಬಂದೂಕು ಹಾಗೂ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ನಲ್ಲಿ ಪ್ರಕರಣಕ್ಕೆ ಮಧ್ಯಂತರ ತಡೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನ.17 ರಂದು(ಇಂದು) ನಡೆಯಲಿದೆ.

Advertisement

ಬುರುಡೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಮೇರೆಗೆ ಮಹೇಶ್ ಶೆಟ್ಟಿ ಮನೆಗೆ ದಾಳಿ ನಡೆಸಿತ್ತು. ಈ ಸಂದರ್ಭ ಒಂದು ಬಂದೂಕು ಮತ್ತು ಎರಡು ತಲವಾರು ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣದಲ್ಲಿ ಜಿಲ್ಲಾ ಕೋರ್ಟ್ ಅರ್ಜಿ ವಜಾ ಮಾಡಿತ್ತು. ಬಳಿಕ ಹೈ ಕೋರ್ಟ್ ನಲ್ಲಿ ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು.

ಒಂದು ವರ್ಷಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗಿಸ್ ಸೆ.18 ರಂದು (18-09-2025 ರಿಂದ 17-09-2026 ರವೆಗೆ) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದರು. ಈ ಆದೇಶದ ವಿರುದ್ಧ ತಿಮರೋಡಿ ವಕೀಲರ ಮೂಲಕ ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್ ಗೆ ಮೊರೆ ಹೋಗಿದ್ದರು. ಆದರೆ ಅ.9 ರಂದು ಜಿಲ್ಲಾ ಕೋರ್ಟ್ ನಲ್ಲಿ ಅರ್ಜಿ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಹೈಕೋರ್ಟ್ ನಲ್ಲಿ ಸೆ.29 ರಂದು ಗಡಿಪಾರು ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಅ.13 ರಂದು ವಿಚಾರಣೆ ನಡೆಸಿ ತಿಮರೋಡಿ ಮೇಲೆ ಮುಂದಿನ ಆದೇಶದವರೆಗೆ ಬಲವಂತದ ಕ್ರಮ ಬೇಡ ಎಂದು ಸೂಚನೆ ನೀಡಿ ಗಡಿಪಾರು ಪ್ರಕರಣದ ಆದೇಶವನ್ನು ಕಾಯ್ದಿರಿಸಿತ್ತು. ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣದ ಆದೇಶದ ಭವಿಷ್ಯ ನ.17 ರಂದು(ಇಂದು) ಹೈ ಕೋರ್ಟ್ ನಲ್ಲಿ ಹೊರಬೀಳಲಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.