ಬೆಳ್ತಂಗಡಿ : ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ !

ಬೆಳ್ತಂಗಡಿ, ಮಾ. 17 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ.

Advertisement

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್‌ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅವರು ಮಾ.16ರಂದು ಆದೇಶ ಹೊರಡಿಸಿದ್ದಾರೆ.

ಗಡಿಪಾರು ಅವಧಿಯು ಮಾ.16ರಿಂದ ಸೆಪ್ಟಂಬ‌ರ್ 16ರವರೆಗೆ ಆರು ತಿಂಗಳು ಕಾಲಾವಧಿಯನ್ನು ಹೊಂದಿದೆ. ಪುತ್ತೂರು ಎಸಿಯವರ ಗಡಿಪಾರು ಆದೇಶದಂತೆ ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದಲ್ಲಿ ಪೊಲೀಸರು ಗಡಿಪಾರು ಆದೇಶ ಪ್ರತಿಯನ್ನು ಜಾರಿ ಮಾಡುವುದಕ್ಕಾಗಿ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಸೋಮವಾರ ಮಧ್ಯರಾತ್ರಿಯೇ ತೆರಳಿದ್ದರು. ಆದರೆ ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಿಮರೋಡಿಯ ಮನೆಯ ಗೋಡೆಗೆ ನೋಟಿಸ್‌ ಅಂಟಿಸಿರುವುದಾಗಿ ತಿಳಿದು ಬಂದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.