ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಮೇ 28 : ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡೀಪಾರು ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ದ.ಕ. ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ 3ನೇ ಬಾರಿಗೆ ಗಡೀಪಾರು ಮಾಡಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಎ.30ರಂದು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರದ ಮುಂದೆ ಮೇಲ್ಮನವಿ ಸಲ್ಲಿಸಿಕೊಳ್ಳುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಹಾಗೂ ನ್ಯಾ| ಎಸ್. ರಾಚಯ್ಯ ಅವರಿದ್ದ ರಜಾಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಅಡ್ವಕೇಟ್ ಜನರಲ್, ಗಡೀ ಪಾರು ಆದೇಶಕ್ಕೆ ತಡೆ ನೀಡುವುದಕ್ಕೆ ಬಲವಾಗಿ ಆಕ್ಷೇಪಿಸಿದರು. ಏಕಸದಸ್ಯ ನ್ಯಾಯಪೀಠದ ಆದೇಶದಂತೆ ಸರಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕಿತ್ತು. ನೇರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದು ಸೂಕ್ತವಲ್ಲ. ಆ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿತು. ಅರ್ಜಿ ಸಂಬಂಧ ಸರಕಾರ, ಪುತ್ತೂರು ವಿಭಾಗಾಧಿಕಾರಿ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿ ಜೂ. 1ಕ್ಕೆ ವಿಚಾರಣೆ ಮುಂದೂಡಿತು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.