ಉಪ್ಪಿನಂಗಡಿ : ದ್ವಿಚಕ್ರ ಸವಾರರೇ ಎಚ್ಚರ – ಮೈಲೇಜ್ ಸಾಧನದ ಹೆಸರಲ್ಲಿ ವಂಚಿಸುತ್ತಿದೆ ಗ್ಯಾಂಗ್ !

ಉಪ್ಪಿನಂಗಡಿ, ಏ. 13 : ಉಪ್ಪಿನಂಗಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರರನ್ನು ತಡೆದು, ಬೈಕ್‌ಗೆ ಹೆಚ್ಚಿನ ಮೈಲೇಜ್ ನೀಡುವ ಸಾಧನ ಅಳವಡಿಸಿಕೊಡುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿರುವ ಗ್ಯಾಂಗ್‌ವೊಂದರ ಬಗ್ಗೆ ವರದಿಯಾಗಿದೆ.

Advertisement

ಕೆಲವು ದಿನಗಳ ಹಿಂದೆ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ಅಂಡರ್‌ಪಾಸ್ ಬಳಿ ಟೈಲರ್ ಒಬ್ಬರನ್ನು ತಡೆದ ಅಪರಿಚಿತ ವ್ಯಕ್ತಿಯೊಬ್ಬ, ನಿಮ್ಮ ಬೈಕ್‌ಗೆ ಮೈಲೇಜ್ ಹೆಚ್ಚಿಸುವ ಡಿವೈಸ್ ಅಳವಡಿಸುತ್ತೇನೆ ಎಂದು ಹೇಳಿ 1,000 ರೂಪಾಯಿ ಬೇಡಿಕೆಯಿಟ್ಟಿದ್ದಾನೆ. ಈ ವಿಚಾರವಾಗಿ ಸವಾರ ಮತ್ತು ಆ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಂಚಕ ಅಲ್ಲಿಂದ ಪರಾರಿಯಾಗಿದ್ದಾನೆ.

ಇದೇ ಮಾದರಿಯಲ್ಲಿ ಈಗಾಗಲೇ ಹಲವು ದ್ವಿಚಕ್ರ ವಾಹನ ಸವಾರರು ಈ ಗ್ಯಾಂಗ್‌ನಿಂದ ವಂಚನೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಹೆದ್ದಾರಿಯಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವ ಇಂತಹ ವ್ಯಕ್ತಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.