ಬೆಳ್ತಂಗಡಿ : ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ, ಏ. 27 : ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

Advertisement



ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.



ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಹರೀಶ್ ಪೂಂಜ ಅವರು, “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.