ಮಲಪ್ಪುರಂ ವ್ಯೂ ಪಾಯಿಂಟ್‌ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಮೃತ್ಯು

ಮಲಪ್ಪುರಂ, ಮೇ. 12 : ವ್ಯೂ ಪಾಯಿಂಟ್ ನಲ್ಲಿ ಸಿಡಿಲು ಬಡಿದು ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಮಂಕಡದಲ್ಲಿ ಮಂಗಳವಾರ ಸಂಜೆ 5:30 ಗಂಟೆಗೆ ನಡೆದಿದೆ.

ಮೃತರನ್ನು ರಹೀಸ್(20), ಫಹಾದ್(19), ಬಹಾಸ್(18) ಮತ್ತು ಜಿಯಾದ್(18) ಎಂದು ಗುರುತಿಸಲಾಗಿದೆ.

ವಿದ್ಯಾರ್ಥಿಗಳೆಲ್ಲರೂ ಮಲ್ಲಪುರಂ ಮೂಲದವರಾಗಿದ್ದಾರೆ. 7 ವಿದ್ಯಾರ್ಥಿಗಳ ಗುಂಪು ವ್ಯೂ ಪಾಯಿಂಟ್‌ಗೆ ತಲುಪಿದ ವೇಳೆ ಈ ಅವಘಡ ಸಂಭವಿಸಿದೆ. ಈ ಪೈಕಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಸದ್ಯ ಗಾಯಳುಗಳನ್ನು ಮಂಜೇರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ಕಾಡಿನ ಮಧ್ಯೆ ದುರ್ಗಮ ಪ್ರದೇಶವಾದ ಕಾರಣ ರಕ್ಷಣಾ ಕಾರ್ಯಾಚರಣೆಯಲ್ಲಿ ವಿಳಂಬವಾಗಿದೆ. ಅನಿರೀಕ್ಷಿತವಾಗಿ ಸುರಿದ ಭಾರೀ ಮಳೆ ನಡುವೆ ಗುಡುಗು ಸಿಡಿಲಿನ ಆರ್ಭಟವೂ ಜೋರಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.