ಮಲವಂತಿಗೆ : ಮಲವಂತಿಗೆ ಭಾಗಕ್ಕೆ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆ

ಮಲವಂತಿಗೆ, ಜು. 20 : ಪ್ರಕೃತಿಯ ಸುಂದರ ಮಡಿಲಲ್ಲಿರುವ ಎಳನೀರು ಪ್ರದೇಶದ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮದಿಂದ ಪ್ರಕೃತಿಗೆ ಹಾನಿಯಾಗಬಾರದು, ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂದುವರಿಯಬೇಕು ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.

Advertisement

ಅವರು ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಗುತ್ಯಡ್ಕದಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಟವರ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಶಾಸಕ ಹರೀಶ್ ಪೂಂಜ ಸುಮಾರು 13 ಕೋಟಿ ರೂ.ಗಿಂತ ಅಧಿಕ ವೆಚ್ಚದಲ್ಲಿ ಇಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದು ಶ್ಲಾಘನೀಯ. ದೇಶದ ಅಭಿವೃದ್ಧಿಯಲ್ಲಿ ಹಳ್ಳಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಶಾಸಕ ಹರೀಶ್ ಪೂಂಜ ಮಾತನಾಡಿ ಮುಂದಿನ ದಿನಗಳಲ್ಲಿ ಇಲ್ಲಿ ಹಂತ-ಹಂತವಾಗಿ ಇನ್ನಷ್ಟು ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಊರಿನವರು ಒಗ್ಗಟ್ಟಿನೊಂದಿಗೆ ಮುಂದುವರಿದು ಪರಸ್ಪರ ಅನ್ನೋನ್ಯತೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡುವುದು ಅಗತ್ಯ ಎಂದರು. ಮಲವಂತಿಗೆ ಗ್ರಾಪಂ ಮಾಜಿ ಅಧ್ಯಕ್ಷ ಪ್ರಕಾಶ್ ಜೈನ್, ಪ್ರಮುಖರಾದ ಗಣೇಶ್ ನಾವೂರು, ಅರವಿಂದ ಲಾಯಿಲ, ದಿನೇಶ್ ಗೌಡ, ಮಧುಸೂದನ್ ಮಲ್ಲ, ಗಣೇಶ್ ಗೌಡ, ಬಿಎಸ್ಸೆನ್ನೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ರಿಂದ ನೇತ್ರಾವತಿ ಪೀಕ್ ಚಾರಣ !

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ನೇತ್ರಾವತಿ ಪ್ರದೇಶದ ಪರಿಶೀಲನೆ ನಡೆಸಿದರು. ಸುಮಾರು 10 ಕಿ.ಮೀ. ದುರ್ಗಮ ಪ್ರದೇಶವನ್ನು ಕಾಲ್ನಡಿಗೆ ಮೂಲಕ ಕ್ರಮಿಸಿ ಇಲ್ಲಿನ ಪರಿಸ್ಥಿತಿ ಅವಲೋಕಿಸಿದರು. ವನ್ಯಜೀವಿ ವಿಭಾಗದ ಅಧಿಕಾರಿಗಳಿಗೆ ಕೆಲವೊಂದು ಸಲಹೆ-ಸೂಚನೆಗಳನ್ನು ನೀಡಿದರು. ಇಲ್ಲಿನ ಅಭಿವೃದ್ಧಿ ಕುರಿತು ಯೋಜನೆ ರೂಪಿಸುವುದಾಗಿ ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.