ಮಲವಂತಿಗೆ : ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಬಹು ಬೇಡಿಕೆಯ ರಸ್ತೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಅವರು ಅನುದಾನ ಒದಗಿಸಿ, ಶಿಲನ್ಯಾಸ ನೆರವೇರಿಸಿದ್ದಾರೆ.

ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ ಕಾಮಗಾರಿ ಪೂರ್ಣಗೊಂಡಿತ್ತು. ಆದರೆ, ಇಲ್ಲಿ ಪಟ್ಟ ಜಾಗ ಹೆಚ್ಚಾಗಿದ್ದರಿಂದ ರಸ್ತೆ ನಿರ್ಮಾಣಕ್ಕೆ ತೊಡಕಾಗಿತ್ತು, ಈ ಹಿನ್ನಲೆಯಲ್ಲಿ ಶಾಸಕರು ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿದ್ದರು. ಸ್ಥಳೀಯರು ರಸ್ತೆ ನಿರ್ಮಾಣಕ್ಕೆ ತಮ್ಮ ಜಾಗವನ್ನು ನೀಡಿ ಸಹಕರಿಸಿದ ಹಿನ್ನಲೆಯಲ್ಲಿ ಇದೀಗ ರಸ್ತೆ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಲಾಗಿದೆ. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರು & ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಜೈನ್, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಶಕ್ತಿಕೇಂದ್ರ ಅಧ್ಯಕ್ಷರಾದ ಮದುಸೂದನ್, ಮಂಡಲ ಕಾರ್ಯದರ್ಶಿ ಪ್ರಭಾಕರ್ ಆಚಾರ್ಯ, ಪಂಚಾಯತ್ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

