ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆ ಹಾವಳಿ : ಜನರಲ್ಲಿ ಆತಂಕ

ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಕಾಟ ಮಿತಿಮೀರಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಕಳೆದ ಹಲವು ದಿನಗಳಿಂದ ಸ್ತಳೀಯವಾಗಿ ಹಲವು ಭಾಗಗಳಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಈ ಭಾಗದಲ್ಲಿ ಎರಡು ಮರಿಯಾನೆ ಸಹಿತ ಸುಮಾರು 13 ಆನೆಗಳು ಓಡಾಡುತ್ತಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಕೃಷಿ ನಾಶದ ಜತೆಗೆ ಜನನಿಬಿಡ ಪ್ರದೇಶಗಳವರೆಗೂ ಕಾಡಾನೆಗಳು ಲಗ್ಗೆ ಇಡುತ್ತಿರುವುದು ಜನರಲ್ಲಿ ಆತಂಕ ಹೆಚ್ಚಲು ಕಾರಣವಾಗಿದೆ.

Advertisement

ಶುಕ್ರವಾರ ಸಂಜೆ ಸುಮಾರು 6:30ರ ಸಮಯ ಇಲ್ಲಿನ ಮಲೆಜೋಡಿ ಎಂಬಲ್ಲಿ ಒಂದು ಮರಿಯಾನೆ ಸಹಿತ ಎಂಟು ಕಾಡಾನೆಗಳು ಕಂಡು ಬಂದಿದೆ. ಇಲ್ಲಿಂದ ಮುಂದುವರಿದ ಕಾಡಾನೆಗಳು ಕೋಡಿ, ಅಮೈ, ಕೂಡಾಲ, ಬೆಡಿಗುತ್ತು ಪರಿಸರಗಳಲ್ಲಿ ಓಡಾಟ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅರಣ್ಯ ಇಲಾಖೆ ಮತ್ತು ಸ್ಥಳೀಯರು ಸೇರಿ ಕಾಡಾನೆಗಳನ್ನು ಓಡಿಸಿದ ಕಾರಣ ಹೆಚ್ಚಿನ ಕೃಷಿಹಾನಿ ಸಂಭವಿಸಿಲ್ಲ. ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ ಗ್ರಾಮಗಳು ಒಂದಕ್ಕೊಂದು ಹತ್ತಿರವಿದ್ದು ಇಲ್ಲೆಲ್ಲ ಈ ಕಾಡಾನೆಗಳ ಹಿಂಡು ಸಂಚಾರ ನಡೆಸುತ್ತಿದೆ ಎನ್ನಲಾಗುತ್ತಿದೆ.

ಮಿತ್ತಬಾಗಿಲು ಗ್ರಾಪಂನಿಂದ ಸ್ಥಳೀಯರಿಗೆ ಅರಣ್ಯ ಪ್ರದೇಶಗಳಲ್ಲಿ ಓಡಾಡದಂತೆ ಈಗಾಗಲೇ ಎಚ್ಚರಿಕೆ ನೀಡಿದ್ದು ಹಗಲಿನ ಹೊತ್ತು ಮುಂಜಾಗ್ರತೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಈ ಗ್ರಾಮಗಳಲ್ಲಿ ಕಳೆದ 15 ವರ್ಷಗಳಿಂದ ಕಾಡಾನೆಗಳ ಕಾಟವಿದ್ದು ಇತ್ತೀಚಿನ ದಿನಗಳಲ್ಲಿ ಇದು ವಿಪರೀತವಾಗಿ ಸಾಕಷ್ಟು ಕೃಷಿ ಹಾನಿ ಜತೆಗೆ ಜನರು ಭಯದಲ್ಲಿ ಜೀವನ ನಡೆಸುವಂತಾಗಿದೆ, ಕಾಡಾನೆಗಳ ಕಾಟಕ್ಕೆ ಶಾಶ್ವತ ಪರಿಹಾರ ಒದಗಿಸುವಂತೆ ಸ್ಥಳೀಯರು ಅರಣ್ಯ ಇಲಾಖೆಯನ್ನು ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.