ನಾರಾವಿ : ಕುತ್ಲೂರು ಮನೆ ಕಳ್ಳತನ – ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

ನಾರಾವಿ : ಕುತ್ಲೂರಿನ ಮನೆಯೊಂದರಲ್ಲಿ ಕಳ್ಳತನ ನಡೆಸಿದ ಪ್ರಕರಣ ಸಂಬಂಧಪಟ್ಟಂತೆ ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ನಾರಾವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅ.2 ರಿಂದ ಅ.6 ರ ನಡುವೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Advertisement

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ಸಬ್ ಇನ್ಸ್ಪೆಕ್ಟರ್ ಓಮನ ಮತ್ತು ತಂಡ ನ.11 ರಂದು ರಾತ್ರಿ ವೇಣೂರು ಕುಂಭಶ್ರೀ ಬಳಿ ವಾಹನ ತಪಾಸಣೆ ಮಾಡುವ ವೇಳೆ ಅನುಮಾನಸ್ಪದವಾಗಿ ಸ್ಕೂಟರ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿ ವಾಹನದ ದಾಖಲೆ ಮತ್ತು ವ್ಯಕ್ತಿಯನ್ನು ಪರಿಶೀಲನೆ ವೇಳೆ ಮಂಗಳೂರಲ್ಲಿ ಕಳ್ಳತನ ಮಾಡಿದ್ದು ಬೆಳಕಿಗೆ ಬಂದಿದೆ. ವೇಣೂರು ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಈತನ ಮೇಲೆ ಸುಮಾರು 150 ಪ್ರಕರಣ ಹೊಂದಿ 45 ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿರುವ ಕುಖ್ಯಾತ ಕಳ್ಳ ಮೂಲತಃ ಚಿಕ್ಕಮಗಳೂರು ಜಿಲ್ಲೆಯ, ಪ್ರಸ್ತುತ ಮಂಗಳೂರು ಸುರತ್ಕಲ್ ಕಾನದಲ್ಲಿ ವಾಸಿಸುತ್ತಿರುವ ಇತ್ತೆ ಬರ್ಪೆ ಅಬೂಬಕ್ಕರ್ (71) ಎಂದು ಬೆಳಕಿಗೆ ಬಂದಿದೆ. ಪೊಲೀಸರು ಮತ್ತಷ್ಟು ವಿಚಾರಣೆ ನಡೆಸಿದಾಗ ನಾರಾವಿಯ ಕುತ್ಲೂರಿನ ಅವಿನಾಶ್ ಮನೆಯಲ್ಲಿ ಕಳ್ಳತನ ಮಾಡಿರುವುದನ್ನು ಆರೋಪಿ ಬಾಯಿಬಿಟ್ಟಿದ್ದಾನೆಂದು ತಿಳಿದುಬಂದಿದೆ.

ವೇಣೂರು ಪೊಲೀಸರು ಆರೋಪಿಯನ್ನು ನ.12 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಿದ್ದಾರೆ. ಆರೋಪಿ ಉಡುಪಿ ಜಿಲ್ಲೆಯ ಶಿರ್ವದಲ್ಲಿ ಕಳ್ಳತನ ಮಾಡಿ ಸಿಕ್ಕಿ ಬಿದ್ದು ಎರಡು ತಿಂಗಳು ಜೈಲು ಸೇರಿ ಇತ್ತಿಚೆಗೆ ಹೊರಬಂದಿದ್ದ ಎನ್ನಲಾಗಿದೆ. ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಪುರ್ ಮಠ ನೇತೃತ್ವದಲ್ಲಿ ವೇಣೂರು ಸಬ್ ಇನ್ಸ್ಪೆಕ್ಟರ್ ಓಮನ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.