ಮಂಗಳೂರು : ಹಾಡಹಗಲೇ ನಗರದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ – ಆಸ್ಪತ್ರೆಗೆ ದಾಖಲು

Advertisement

ಮಂಗಳೂರು, ಜು. 25 : ನಗರದ ಲಾಲ್‌ಬಾಗ್ ಸಮೀಪ ಶನಿವಾರ ಯುವಕನೊಬ್ಬನ ಮೇಲೆ ಅಪರಿಚಿತ ವ್ಯಕ್ತಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

Advertisement

ಮಾಹಿತಿಯ ಪ್ರಕಾರ, ದ್ವಿಚಕ್ರ ವಾಹನದಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯು ಏಕಾಏಕಿ ಯುವಕನ ಮೇಲೆ ದಾಳಿ ನಡೆಸಿದ್ದು, ಬೆನ್ನಿನ ಹಿಂಭಾಗಕ್ಕೆ ಗಂಭೀರ ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

Advertisement

ಗಾಯಗೊಂಡ ಯುವಕನನ್ನು ತಕ್ಷಣವೇ ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಜನನಿಬಿಡ ಪ್ರದೇಶದಲ್ಲೇ ನಡೆದ ಈ ದಾಳಿಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ