ಮಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆಗಾಗಿ 29 ಪೊಲೀಸ್ ಅಧಿಕಾರಿಗಳು, 118 ಸಿಬ್ಬಂದಿಗೆ ಗೌರವ

ಮಂಗಳೂರು, ಜು. 21 : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರು ಸೋಮವಾರ 29 ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

Advertisement

ಕಳೆದ ಆರು ತಿಂಗಳ ಅವಧಿಯಲ್ಲಿ ಪೊಲೀಸರು 24 ಎಲ್.ಪಿ.ಸಿ. (Long Pending Cases) ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್.ಬಿ.ಡಬ್ಲ್ಯು. (NBW) ವಾರಂಟ್ ಹೊಂದಿದ್ದ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.

2026ನೇ ಸಾಲಿನಲ್ಲಿ ಸೊತ್ತು ಕಳವು ಪ್ರಕರಣಗಳ ಪೈಕಿ 88 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವುದರೊಂದಿಗೆ, ಸುಮಾರು 1.20 ಕೋಟಿ ರೂ. ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಪೆಡ್ಲರ್ ಗಳ ವಿರುದ್ಧ ೮೪ ಪ್ರಕರಣಗಳನ್ನು ದಾಖಲಿಸಿ, 142 ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 346 ಪ್ರಕರಣಗಳನ್ನು ದಾಖಲಿಸಿ, 443 ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಪೆಡ್ಲರ್ ಗಳ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸೈಬರ್ ಅಪರಾಧಗಳು ನಡೆಯದಂತೆ ಕಾಲಕಾಲಕ್ಕೆ ನಗರ ವ್ಯಾಪ್ತಿಯಲ್ಲಿ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿ, ಪ್ರಸ್ತುತ ಸಾಲಿನಲ್ಲಿ ಸೈಬರ್ ವಂಚನೆ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಸೈಬರ್ ವಂಚನೆ ನಡೆದ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡುವ ಮೂಲಕ ತ್ವರಿತ ಕ್ರಮ ಕೈಗೊಂಡು, ವಂಚನೆಗೊಳಗಾದ ಹಣವನ್ನು ಮರುಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರನ್ನು ಗೌರವಿಸಲಾಯಿತು.

ಅದೇ ರೀತಿ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿಯೂ ಗಮನಾರ್ಹ ಸಾಧನೆ ಮಾಡಲಾಗಿದ್ದ ಅಧಿಕಾರಿ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಮುಖ್ಯವಾಗಿ ನೇಪಾಳದಿಂದ ಕಾರ್ಯನಿರ್ವಹಿಸುತ್ತಿದ್ದ ಬೃಹತ್ ಹೂಡಿಕೆ ವಂಚನೆ ಜಾಲವನ್ನು ಭೇದಿಸಿ, ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ಸೈಬರ್ ಅಪರಾಧ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಲು ಸಹಕರಿಸಿರುತ್ತಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ಇಲಾಖೆಯು ನಿರಂತರ ನಿಗಾ ವಹಿಸಿದ್ದು, ದ್ವೇಷ ಭಾಷಣ, ಅಪಪ್ರಚಾರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪರಿಣಾಮಕಾರಿ ಅಧಿಕಾರಿ/ಸಿಬ್ಬಂದಿಗಳು ಕ್ರಮ ಕೈಗೊಂಡಿರುತ್ತಾರೆ.

ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಾಗಿ, ತನಿಖಾ ಸಹಾಯಕರಾಗಿ ಹಾಗೂ ನ್ಯಾಯಾಲಯದ ಕರ್ತವ್ಯಗಳಲ್ಲಿ ಉತ್ತಮ ಸೇವೆ ಸಲ್ಲಿಸಿ, ಗುಣಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಶ್ರಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಅದೇ ರೀತಿ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ವಿವಿಧ ಪ್ರಮುಖ ಬಂದೋಬಸ್ತುಗಳನ್ನು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಹಾಗೂ 112 ತುರ್ತು ಸ್ಪಂದನೆ ಸಹಾಯವಾಣಿಯ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ನಗರದ ನಿಸ್ತಂತು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.