ಮಂಗಳೂರು : ರಾಕಿಂಗ್ ಸ್ಟಾರ್ ಯಶ್ ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ – ಧರ್ಮಸ್ಥಳದತ್ತ ಪ್ರಯಾಣ !

Advertisement

ಮಂಗಳೂರು, ಆ. 25 : ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಮಂಗಳೂರಿಗೆ ಆಗಮಿಸಿದ್ದಾರೆ. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯಶ್ ಅವರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದ್ದಾರೆ.

Advertisement

ಚಿತ್ರ ಬಿಡುಗಡೆಗೂ ಮುನ್ನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಉದ್ದೇಶದಿಂದ ಯಶ್ ಮಂಗಳೂರಿಗೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ, ಇಂದು ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ.

Advertisement

ಪ್ರತಿ ಚಿತ್ರದ ಬಿಡುಗಡೆಗೂ ಮುನ್ನ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡುವ ಪದ್ಧತಿಯನ್ನು ಯಶ್ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯೂ ಅದೇ ಸಂಪ್ರದಾಯವನ್ನು ಪಾಲಿಸುತ್ತಿರುವುದು ಅಭಿಮಾನಿಗಳ ಗಮನ ಸೆಳೆದಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಶ್ ಆಗಮಿಸಿದ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ನಟನನ್ನು ಕಣ್ತುಂಬಿಕೊಳ್ಳಲು ಉತ್ಸಾಹ ವ್ಯಕ್ತಪಡಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ