ಮಂಗಳೂರು : ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಬಾಂಗ್ಲಾ ದೇಶಿಗರು ಪತ್ತೆ – ಅಕ್ರಮ ಆಧಾ‌ರ್ ಮಾಡಿಸಿಕೊಂಡ ಖದೀಮರು

Advertisement

ಮಂಗಳೂರು, ಜು. 10 : ದೇಶಾದ್ಯಂತ ಮತಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಮೂಲಕ ಬಾಂಗ್ಲಾದೇಶಿಗರ ಪತ್ತೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದೇ ವೇಳೆ ಮತದಾರ ಪಟ್ಟಿ ಸೇರದೆ ಕಾರ್ಮಿಕರ ಸೋಗಿನಲ್ಲಿ ಬಂದು ಆಧಾರ್ ಮಾಡಿಸಿ ನೆಲೆ ಕಂಡುಕೊಳ್ಳುತ್ತಿರುವ ಬಾಂಗ್ಲಾ ಮೂಲದ ನಿವಾಸಿಗಳ ಪತ್ತೆಗಾಗಿ ಮಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Advertisement

ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಮುಕ್ಕದಲ್ಲಿ ಕಟ್ಟಡ ಕಾಮಗಾರಿಗೆಂದು ಬಂದು ನೆಲೆ ಕಂಡುಕೊಂಡಿದ್ದ ಎಂಟು ಮಂದಿ ಬಾಂಗ್ಲಾದೇಶಿಗರನ್ನು ಸೆರೆ ಹಿಡಿಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಮುಕ್ಕದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಕಟ್ಟಡ ಕಾಮಗಾರಿಗೆ ಬಂದಿದ್ದ ಕಾರ್ಮಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಬಾಂಗ್ಲಾ ಮೂಲದವರು ಅನ್ನುವುದು ಪತ್ತೆಯಾಗಿದೆ.

Advertisement

ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿಕೊಂಡಿದ್ದಲ್ಲದೆ, ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದೆ. ಇವರನ್ನು ಅಜರುಲ್ ಇಸ್ಲಾಂ, ಮುಹಮ್ಮದ್ ರಕೀಬ್, ಜಾಹಿದ್ ಹುಸೇನ್, ಮಹಮ್ಮದ್ ಬಿಲಾಲ್ ಹುಸೇನ್, ಸೋಯೆಬ್ ಉಲ್ಲಾ ಮಹಮ್ಮದ್ ಸಂಟುಲ್, ಮೌಕರ್ ಆಲಿ, ಅಜರುಲ್ ಇಸ್ಲಾಂ ಎಂದು ಗುರುತಿಸಲಾಗಿದ್ದು ಭಾರತದ ಗಡಿಭಾಗ ಬಾಂಗ್ಲಾದ ರಾಜಶಾಹಿ ಎಂಬಲ್ಲಿನ ನಿವಾಸಿಗಳು ಎಂದು ತಿಳಿದುಬಂದಿದೆ.

ಬಾಂಗ್ಲಾದಿಂದ ಅಕ್ರಮವಾಗಿ ಭಾರತದ ಗಡಿಯಿಂದ ನುಸುಳಿಕೊಂಡು ಪಶ್ಚಿಮ ಬಂಗಾಳದ ಮೂಲಕ ಕರ್ನಾಟಕಕ್ಕೆ ಕೂಲಿ ಕಾರ್ಮಿಕರಾಗಿ ಬಂದಿದ್ದು ಇಲ್ಲಿ ಸ್ಥಳೀಯ ಏಜಂಟರ ಮೂಲಕ ಆಧಾ‌ರ್ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ. ಇವರ ಬಗ್ಗೆ ವಿದೇಶಿಗರ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದ್ದು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಸುಧೀ‌ರ್ ರೆಡ್ಡಿ ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ