ಉಡುಪಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನಿಂದ ಯುವತಿಗೆ ಚೂರಿ ಇರಿತ – ಯುವತಿಗೆ ಗಂಭೀರ ಗಾಯ

Advertisement

ಉಡುಪಿ, ಮೇ 13 : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದ ಘಟನೆ ಮಣಿಪಾಲ-ಅಲೆವೂರು ರಸ್ತೆಯ ಶಾಂತಿನಗರ ಸಮೀಪದ ಐಡಿಯಲ್ ಬಿಲ್ಡಿಂಗ್‌ನ ಮಹಿಳಾ ಪಿಜಿಯಲ್ಲಿ ನಡೆದಿದೆ.

ಅಂಕೋಲ ಮೂಲದ ಯೋಗಿತಾ (23) ಹಲ್ಲೆಗೊಳಗಾದ ಯುವತಿ. ಮಂಗಳವಾರ ರಾತ್ರಿ ಪಿಜಿಗೆ ಬಂದ ಆರೋಪಿ ಯುವತಿಯೊಂದಿಗೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿ ನಡೆಸಿದ ಆರೋಪಿ ಪರಾರಿಯಾಗಿದ್ದು, ಮಣಿಪಾಲ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ