ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ – ಮೈತೇಯಿ ಸಮುದಾಯದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ

ಇಂಫಾಲ, ಜ. 22 : ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಶಂಕಿತ ಕುಕಿ ಉಗ್ರಗಾಮಿಗಳು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಅಪಹರಿಸಿ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಇದು ರಾಜ್ಯದಲ್ಲಿ ಉದ್ವಿಗ್ನತೆ ಹೆಚ್ಚಲು ಕಾರಣವಾಗಿದೆ.

Advertisement

ಮಯಾಂಗಲಂಬಮ್ ರಿಷಿಕಾಂತ ಸಿಂಗ್ ಅವರನ್ನು ಬುಧವಾರ ತುಯಿಬಾಂಗ್ ಪ್ರದೇಶದ ನಿವಾಸದಿಂದ ಅಪಹರಿಸಿ, ನಟಜಂಗ್ ಗ್ರಾಮದ ಸಮೀಪದಲ್ಲಿ ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಹರಣಕಾರರು ಕಾರ್ಯಾಚರಣೆಗಳ ಅಮಾನತು (SOO) ಒಪ್ಪಂದಕ್ಕೆ ಸಹಿ ಹಾಕದ ಯುನೈಟೆಡ್ ಕುಕಿ ರಾಷ್ಟ್ರೀಯ ಸೇನೆ (UNKA) ಸದಸ್ಯರಾಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯದೆಲ್ಲೆಡೆ ಪೊಲೀಸ್ ಮತ್ತು ಸೇನಾ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.