ಬೆಳಗಾವಿ : ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲಿನ ಇಡಿ ದಾಳಿ ಅಂತ್ಯ – ಲೋಬೋಗಾಗಿ ತೀವ್ರ ಹುಡುಕಾಟ

ಬೆಳಗಾವಿ, ಜೂನ್ 25 : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ(ಬಾಮೈದ) ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ ಸುದೀರ್ಘ ದಾಳಿ ಕೊನೆಗೂ ಅಂತ್ಯವಾಗಿದೆ.

Advertisement

ಸತತ 24 ಗಂಟೆಗಳ ಕಾಲ ನಡೆಸಿದ ಸುದೀರ್ಘ ಶೋಧಕಾರ್ಯದ ಬಳಿಕ ಇಡಿ ಅಧಿಕಾರಿಗಳು ಬೆಳಗಾವಿಯಿಂದ ನಿರ್ಗಮಿಸಿದ್ದಾರೆ. ಅಬಕಾರಿ ಇಲಾಖೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಅಧಿಕಾರಿಗಳು, ಬೆಳಗಾವಿ ನಗರದ ಟಿವಿ ಸೆಂಟರ್‌ನಲ್ಲಿರುವ ಮಂಜುನಾಥ್ ಅವರ ಮುಖ್ಯ ನಿವಾಸ ಸೇರಿದಂತೆ ಜಿಲ್ಲೆಯ ಒಟ್ಟು ಆರು ಕಡೆಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ರಾಜ್ಯಾದ್ಯಂತ ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಕಡೆಗಳಲ್ಲಿ ಈ ದಾಳಿ ನಡೆದಿತ್ತು. ಸದ್ಯ ಲಭ್ಯವಾಗಿರುವ ಎಲ್ಲಾ ಪ್ರಮುಖ ದಾಖಲೆಗಳೊಂದಿಗೆ ಇಡಿ ಅಧಿಕಾರಿಗಳ ತಂಡವು ಬೆಂಗಳೂರಿಗೆ ತೆರಳಿದ್ದು, ದಾಳಿಯ ಸಂಪೂರ್ಣ ವರದಿಯನ್ನು ಇಡಿ ನಿರ್ದೇಶಕರಿಗೆಸಲ್ಲಿಸಲಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರ ಆಪ್ತರಾಗಿರುವ ಗೋವಾ ಮೂಲದ ‘ಲೋಬೋ’ ಎಂಬುವವರಿಗಾಗಿ ಇಡಿ ಅಧಿಕಾರಿಗಳು ಬೆಳಗಾವಿಯಲ್ಲಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ ಬೆಳಗಾವಿಯಲ್ಲಿ ಲೋಬೋ ಪತ್ತೆಯಾಗದ ಹಿನ್ನೆಲೆಯಲ್ಲಿ, ಅವರನ್ನು ವಶಕ್ಕೆ ಪಡೆಯಲು ಇಡಿಯ ಎರಡು ವಿಶೇಷ ತಂಡಗಳು ಈಗಾಗಲೇ ಗೋವಾಗೆ ರವಾನೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಆರೋಪಗಳೇನು?

ಸರ್ಕಾರಿ ಸಂಬಳ ಪಡೆಯುತ್ತಲೇ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಮಂಜುನಾಥ್ ಮೇಲಿದೆ. ಆದಾಯಕ್ಕಿಂತ ಅಧಿಕವಾಗಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸಂಪಾದನೆ, ಅಬಕಾರಿ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡೇ ಬೇರೆಯವರ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಬಾರ್ ಲೈಸೆನ್ಸ್ ಹೊಂದಿರುವ ಆರೋಪ, ದೇಶದ ಗಡಿ ದಾಟಿ ನಡೆದಿರುವ ಆರ್ಥಿಕ ವಹಿವಾಟುಗಳು, ಹವಾಲಾ ಮಾರ್ಗಗಳ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಇದನ್ನೂ ಓದಿ: ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ – ಕಟ್ಟಡಗಳು ಕುಸಿತ, ಸಾವುನೋವಿನ ಶಂಕೆ

ಜೈಲು ಸೇರಿದ್ದ ಮಂಜುನಾಥ್‌

ವೈ. ಮಂಜುನಾಥ್ ವಿವಾದಗಳಿಗೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ. 2009ರಿಂದ 2013ರವರೆಗೆ ಮೈಸೂರಿನಲ್ಲಿ ಅಬಕಾರಿ ಡಿಸಿ (DC) ಆಗಿದ್ದ ಅವಧಿಯಲ್ಲಿ ಲಂಚದ ಪ್ರಕರಣವೊಂದರಲ್ಲಿ ಲೋಕಾಯುಕ್ತ ಪೊಲೀಸರು ಇವರನ್ನು ಬಂಧಿಸಿದ್ದರು. ಆ ವೇಳೆ 15 ದಿನಗಳ ಕಾಲ ಮೈಸೂರು ಕೇಂದ್ರ ಕಾರಾಗೃಹದಲ್ಲಿದ್ದ ಇವರು ಬಿಡುಗಡೆಯಾಗಿ ಬಂದಾಗ, ಇವರ ಅಭಿಮಾನಿಗಳು ಜೈಲಿನಿಂದ ಬರೋಬ್ಬರಿ 2 ಕಿಲೋಮೀಟರ್ ದೂರ ಇವರನ್ನು ಹೆಗಲ ಮೇಲೆ (ತೋಳಿನಲ್ಲಿ) ಎತ್ತಿಕೊಂಡು ಮೆರವಣಿಗೆ ಮಾಡಿದ್ದರು. ಈ ಘಟನೆ ಆಗ ಇಡೀ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಹಾಗೂ ಸುದ್ದಿಗೆ ಗ್ರಾಸವಾಗಿತ್ತು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.