ಮದುವೆ ಸಮಾರಂಭದಲ್ಲಿ ಎಣ್ಣೆ ಕೊಡಲಿಲ್ಲವೆಂದು ಗಲಾಟೆ – ವಧು ವರರ ಮೇಲೆಯೇ ಹಲ್ಲೆ !

ಗ್ವಾಲಿಯರ್, ಏ. 02 : ಮದುವೆ ಸಮಾರಂಭದಲ್ಲಿ ಮದ್ಯ ನೀಡಲಿಲ್ಲ ಎಂಬ ಕಾರಣಕ್ಕೆ ಕುಪಿತಗೊಂಡ ಅತಿಥಿಗಳ ಗುಂಪೊಂದು ವಧು-ವರ ಹಾಗೂ ಅವರ ಕುಟುಂಬದವರ ಮೇಲೆ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಪಟಾಯ್ ಗ್ರಾಮದಲ್ಲಿ ನಡೆದಿದೆ.

Advertisement

ಘಟನೆಯ ವಿವರ

ಸ್ಥಳೀಯ ನಿವಾಸಿ ಮಹೇಶ್ ಜಾತವ್ ಎಂಬುವವರ ವಿವಾಹ ಸಮಾರಂಭ ಮಂಗಳವಾರ ರಾತ್ರಿ ಆರೋನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿತ್ತು. ಈ ವೇಳೆ ನೆರೆಹೊರೆಯವರು ಹಾಗೂ ಕೆಲವು ಅತಿಥಿಗಳು ಮದ್ಯದ ವ್ಯವಸ್ಥೆ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ. ಆದರೆ ವರನು ಮದ್ಯ ನೀಡಲು ನಿರಾಕರಿಸಿದ್ದರಿಂದ ವಿವಾದ ಉಂಟಾಗಿದೆ.

ತಾಯಿ-ಮಗನ ಮೇಲೆ ಹಲ್ಲೆ

ಮದುವೆ ಶಾಸ್ತ್ರಗಳು ಮುಗಿದು ವಧು ಮನೆಗೆ ಬಂದ ಸಮಯದಲ್ಲಿ, ನೆರೆಹೊರೆಯವರು ವರನ ಬಳಿ ಬಂದು ಮದ್ಯ ಖರೀದಿಸಲು ಹಣ ನೀಡುವಂತೆ ಪೀಡಿಸಿದ್ದಾರೆ. ಹಣ ನೀಡಲು ನಿರಾಕರಿಸಿದಾಗ ವರನ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಬಂದ ವರನ ತಾಯಿ ಶೀಲಾ, ತಂದೆ ಹಾಗೂ ವಧುವಿನ ಮೇಲೆಯೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಯ ಸಂದರ್ಭದಲ್ಲಿ ಆರೋಪಿಗಳು ಮನೆಯಲ್ಲಿದ್ದ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ ಎಂದು ದೂರು ನೀಡಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.