ಅರ್ಚಕರಿಗೆ ಸಾಕ್ಷಿ ಹೇಳುವ ಸಂಕಷ್ಟ : ದೇವಾಲಯದಲ್ಲಿ ಲಗ್ನ ನಿಷೇಧ…!

ಬೆಂಗಳೂರು : ರಾಜಧಾನಿ ಬೆಂಗಳೂರಿನ ಹಲಸೂರು ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಮದುವೆಗಳನ್ನು ಹೆಚ್ಚುತ್ತಿರುವ ವಿಚ್ಛೇದನ ಪ್ರಕರಣಗಳಿಂದಾಗಿ ನಿಲ್ಲಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ವಿಚ್ಛೇಧನ ಪ್ರಕರಣದ ಸಂದರ್ಭದಲ್ಲಿ ದಂಪತಿ ನ್ಯಾಯಾಲಯಕ್ಕೆ ಹೋದಾಗ, ಮದುವೆ ಮಾಡಿಸಿದ ಅರ್ಚಕರನ್ನು ಸಾಕ್ಷಿಯಾಗಿ ನ್ಯಾಯಾಲಯ ಕರೆಯುತ್ತಿದೆ. ಹೀಗಾಗಿ ಅರ್ಚಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ಕಾರಣಕ್ಕಾಗಿ ಹಲಸೂರಿನ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಆರೇಳು ವರ್ಷಗಳಿಂದ ಮದುವೆಯನ್ನೇ ನಿಲ್ಲಿಸಲಾಗಿದೆ. ಮದುವೆ ನಿಲ್ಲಿಸಿರುವ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಹಲವರು ಗೊಂದಲಕ್ಕೀಡಾಗಿದ್ದರು. ಇದೀಗ ದೇವಾಲಯದ ಆಡಳಿತ ಮಂಡಳಿ ಈ ಬಗ್ಗೆ ಇದೀಗ ಸ್ಪಷ್ಟನೆ ಕೊಟ್ಟಿದೆ. ಈ ಸಂಬಂಧ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಿಗೆ ಪತ್ರ ಬರೆದಿರುವ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ, ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಕಳೆದ 6-7 ವರ್ಷಗಳಿಂದ ಮದುವೆ ಕಾರ್ಯಗಳನ್ನು ನಿಲ್ಲಿಸಲಾಗಿತ್ತು.

Advertisement

ಈ ಹಿಂದೆ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದ ದಂಪತಿಗಳು ಅವರಿಗೆ ಹೊಂದಾಣಿಕೆಯಾಗದೇ ಇದ್ದಾಗ ನ್ಯಾಯಾಲಯಗಳಿಗೆ ಹೋಗಿ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದರು. ದಂಪತಿಯ ವಿಚಾರಣೆ ವೇಳೆ ಸೋಮೇಶ್ವರಸ್ವಾಮಿ ದೇವಸ್ಥಾನದ ಅರ್ಚಕರನ್ನು ಸಹ ನ್ಯಾಯಾಲಯಗಳಿಗೆ ಹಾಜರುಪಡಿಸುತ್ತಿದ್ದರು. ಈ ಎಲ್ಲಾ ಕಾರಣಗಳಿಂದ ಅರ್ಚಕರು ಸಹ ದೇವಾಲಯದಲ್ಲಿ ಮದುವೆ ಮಾಡಲು ನಿರಾಕರಿಸುತ್ತಿದ್ದರು. ಸೋಮೇಶ್ವರ ದೇವಾಲಯದಲ್ಲಿನ ಅಪಪ್ರಚಾರವನ್ನು ತಪ್ಪಿಸುವ ಸಲುವಾಗಿ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು, ಉಳಿದಂತಹ ದೇವಸ್ಥಾನಗಳಲ್ಲೂ ಇಂತಹ ನಿರ್ಧಾರ ಕೈಗೊಂಡರೆ ಅಚ್ಚರಿ ಪಡಬೇಕಾಗಿಲ್ಲ.!

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.