ಅಪ್ರಾಪ್ತ ಬಾಲಕನಿಗೆ ಉದ್ಯೋಗದ ಆಮಿಷವೊಡ್ಡಿ ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ – ಪೊಲೀಸ್ ಮೊರೆ

ಉತ್ತರ ಪ್ರದೇಶ, ಮೇ 19 : ಅಪ್ರಾಪ್ತ ಬಾಲಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಜಮ್ಮು ಮತ್ತು ಕಾಶ್ಮೀರಕ್ಕೆ ಕರೆದೊಯ್ದು, ಅಲ್ಲಿ ಆತನನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಆತಂಕಗೊಂಡ ಬಾಲಕನ ಪೋಷಕರು ತಮ್ಮ ಮಗನನ್ನು ರಕ್ಷಿಸಿಕೊಡುವಂತೆ ಬಿಜ್ನೋರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಕಚೇರಿಗೆ ಧಾವಿಸಿ ದೂರು ನೀಡಿದ್ದಾರೆ.

Advertisement

ಬಿಜ್ನೋರ್ ನಗರದ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಬಖರಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನಿವಾಸಿಯಾದ ವಿಶಾಲ್ ಎಂಬ ಅಪ್ರಾಪ್ತ ಬಾಲಕನಿಗೆ ಅದೇ ಭಾಗದ ವಸೀಮ್ ಎಂಬ ಯುವಕ ಒಳ್ಳೆಯ ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿದ್ದನು. ಇದನ್ನು ನಂಬಿದ ಬಾಲಕ ಆತನೊಂದಿಗೆ ಕಾಶ್ಮೀರಕ್ಕೆ ತೆರಳಿದ್ದನು. ಆದರೆ ಅಲ್ಲಿಗೆ ಹೋದ ನಂತರ ಬಾಲಕನಿಗೆ ಪ್ರಾಣ ಬೆದರಿಕೆ ಹಾಕಿ, ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮತಾಂತರದ ನಂತರ ವಿಶಾಲ್ ಹೆಸರನ್ನು ‘ಹಮ್ಮಾ’ ಎಂದು ಬದಲಾಯಿಸಲಾಗಿದೆ ಎಂದು ತಿಳಿದುಬಂದಿದೆ.

ಮಗನ ಬಗ್ಗೆ ಮಾಹಿತಿ ಪಡೆಯಲು ಪೋಷಕರು ವಸೀಮ್ ನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, “ಇನ್ಮುಂದೆ ನಿಮ್ಮ ಮಗನನ್ನು ಮರೆತುಬಿಡಿ’ ಎಂದು ಆ ಕಡೆಯಿಂದ ಉದ್ಧಟತನದ ಉತ್ತರ ಬಂದಿದೆ ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ. ಈ ನಡುವೆ, ಬಾಲಕನ ಮತಾಂತರ ಪ್ರಕ್ರಿಯೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ. ಈ ದೂರಿನ ಆಧಾರದ ಮೇಲೆ ಬಿಜ್ನೋರ್ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡಿದ್ದು, ಕಾಶ್ಮೀರದಲ್ಲಿರುವ ಬಾಲಕನನ್ನು ಸುರಕ್ಷಿತವಾಗಿ ಪತ್ತೆಹಚ್ಚಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.