ಬಂಟ್ವಾಳ : ಮದರಂಗಿ ಕಾರ್ಯಕ್ರಮದ ನಿರೂಪಣೆ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಮೃತ್ಯು

Advertisement

ಬಂಟ್ವಾಳ, ಏ. 11 : ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

Advertisement

ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿಥ್ ( 32) ಮೃತಪಟ್ಟ ವ್ಯಕ್ತಿ. ನಾಯಿಲದ ಸಂಬಂಧಿಕರ ಮನೆಯಲ್ಲಿ ಮದರಂಗಿ ಕಾರ್ಯಕ್ರಮದ ನಿರೂಪಣೆಗಾಗಿ ವೇದಿಕೆ ಹತ್ತಿ ಕಾರ್ಯಕ್ರಮ ಪ್ರಾರಂಭಿಸುತ್ತಿದ್ದಂತೆ ಹಠಾತ್ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

Advertisement

ಕೂಡಲೇ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅವರು ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ