ಉಡುಪಿ : ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಸೈಯ್ಯದ್ ಮೊಹಮ್ಮದ್ ಬಂಧನ !

Advertisement

ಉಡುಪಿ, ಜೂ. 26 : ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ (MDMA) ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬ್ರಹ್ಮಾವರದ ನಿವಾಸಿ ಸೈಯ್ಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.

Advertisement

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದ ತಂಡವು ಕೊಡವೂರು ಗ್ರಾಮದ ಮಲ್ಪೆಯ ಸಾರ್ವಜನಿಕ ಸ್ಥಳದಲ್ಲಿ ಈ ಕಾರ್ಯಾಚರಣೆ ನಡೆಸಿದೆ.

Advertisement

ಆರೋಪಿಯು ಕಾಪು, ಬ್ರಹ್ಮಾವರ, ಉಡುಪಿ ಮತ್ತು ಮಣಿಪಾಲದ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಬಂಧಿತನಿಂದ 1 ಗ್ರಾಂ 3 ಮಿಲಿ ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಸಾಗಾಟಕ್ಕೆ ಬಳಸಿದ್ದ ಒಂದು ಸ್ಕೂಟರ್ ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಒಟ್ಟು ಮೌಲ್ಯ 1,52,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ