ಮೆಕ್ಸಿಕೋ : ಫುಟ್‌ಬಾಲ್‌ ಮೈದಾನದಲ್ಲಿ ಗುಂಡಿನ ದಾಳಿ –  11 ಬಲಿ!

ಮೆಕ್ಸಿಕೋ, ಜ. 27 : ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ (Guanajuato) ರಾಜ್ಯದ ಸಲಾಮಾಂಕಾ ನಗರದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಫುಟ್‌ಬಾಲ್ ಪಂದ್ಯ ಮುಗಿಯುತ್ತಿದ್ದಂತೆ ಮೈದಾನಕ್ಕೆ ನುಗ್ಗಿದ ಬಂದೂಕುಧಾರಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 11 ಜನರು ಮೃತಪಟ್ಟಿದ್ದಾರೆ ಮತ್ತು 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಲಾಮಾಂಕಾ ಮೇಯರ್ ಸೀಸರ್ ಪ್ರೀಟೊ(Salamanca Mayor Cesar Prieto) ಅವರ ಪ್ರಕಾರ, ಫುಟ್‌ಬಾಲ್ ಪಂದ್ಯವು ಮುಕ್ತಾಯದ ಹಂತದಲ್ಲಿದ್ದಾಗ ಈ ದಾಳಿ ನಡೆದಿದೆ.ಗುಂಡಿನ ಸುರಿಮಳೆಯಿಂದಾಗಿ 10 ಜನರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಗಾಯಗೊಂಡ 12 ಜನರಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕ ಸೇರಿದ್ದಾನೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ಗ್ವಾನಾಜುವಾಟೊ ಪ್ರದೇಶವು ಕಳೆದ ಕೆಲವು ವರ್ಷಗಳಿಂದ ಮೆಕ್ಸಿಕೋದ ಅತ್ಯಂತ ಹೆಚ್ಚು ಕೊಲೆ ಪ್ರಕರಣಗಳು ದಾಖಲಾಗುವ ರಾಜ್ಯವಾಗಿ ಹೊರಹೊಮ್ಮಿದೆ. ಸ್ಥಳೀಯ ‘ಸಾಂಟಾ ರೋಸಾ ಡಿ ಲಿಮಾ’ ಗ್ಯಾಂಗ್ ಮತ್ತು ಪ್ರಭಾವಿ ‘ಜಲಿಸ್ಕೊ ನ್ಯೂ ಜನರೇಷನ್ ಕಾರ್ಟೆಲ್’ ನಡುವಿನ ಆಧಿಪತ್ಯದ ಹೋರಾಟವೇ ಈ ರಕ್ತಪಾತಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ನಗರದಲ್ಲಿ ಅಪರಾಧ ಚಟುವಟಿಕೆಗಳು ಮಿತಿಮೀರಿದ್ದು, ಈ ಭೀಕರ ದಾಳಿಯು ಅದರ ಒಂದು ಭಾಗವಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ತಕ್ಷಣವೇ ಫೆಡರಲ್ ಪಡೆಗಳ ಸಹಾಯ ಬೇಕು ಎಂದು ಮೇಯ‌ರ್ ಅವರು ಅಧ್ಯಕ್ಷೆ ಕೌಡಿಯಾ ಶೀನ್‌ಬಾಮ್ ಅವರಿಗೆ ಮನವಿ ಮಾಡಿದ್ದಾರೆ.

ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದೆ. ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.