ವಿಪಕ್ಷಗಳ ವಿರೋಧದ ಮಧ್ಯೆ – ಸಂಸತ್ತಿನ ಮೇಲ್ಮನೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ, ಡಿ. 20 : ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) – ವಿಕಸಿತ್ ಭಾರತ್ ಜಿ ರಾಮ್ ಜಿ ಮಸೂದೆ – 2025 ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ ಸುಮಾರು 12:15ರ ವೇಳೆಗೆ ಧ್ವನಿ ಮತದ ಮೂಲಕ ಮಸೂದೆಗೆ ಅನುಮೋದನೆ ದೊರೆಯಿತು. ಈ ಮಸೂದೆಯನ್ನು ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿತ್ತು.

Advertisement

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNAREGA)ಯ ಹೆಸರನ್ನು ಬದಲಿಸಿ ಹೊಸ ರೂಪದಲ್ಲಿ ಮಸೂದೆ ಪರಿಚಯಿಸಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು. ರಾಜ್ಯಸಭೆಯಲ್ಲಿ ನಡೆದ ಚರ್ಚೆ ವೇಳೆ ಭಾರೀ ಗದ್ದಲ ಹಾಗೂ ಕೋಲಾಹಲ ಉಂಟಾಗಿತ್ತು. ಮಸೂದೆಯ ವಿರೋಧವಾಗಿ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು ಸಭಾತ್ಯಾಗ ನಡೆಸಿದವು. ಈ ಸಂದರ್ಭ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮಸೂದೆಗೆ ಅಂಗೀಕಾರ ಪಡೆದುಕೊಂಡರು.

ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಸಂಸತ್ತಿನ ಆವರಣದಲ್ಲೇ ರಾತ್ರಿ ಪೂರ್ತಿ ಧರಣಿ ನಡೆಸಿದರು. ಸಂವಿಧಾನ ಸದನದ ಗೇಟ್ ಬಳಿ ಪ್ರತಿಭಟನೆ ನಡೆಸಿದ ಅವರು, ಸರ್ಕಾರದ ಕ್ರಮವನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಆರೋಪಿಸಿದರು. ಈ ಪ್ರತಿಭಟನೆ ಬೆಳಗಿನ ಜಾವದವರೆಗೂ ಮುಂದುವರಿಯಿತು. ಮಸೂದೆ ಅಂಗೀಕಾರದೊಂದಿಗೆ ಗ್ರಾಮೀಣ ಉದ್ಯೋಗ ಯೋಜನೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಯಾಗುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಇದು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ. ಆದರೆ, ಹೊಸ ಸ್ವರೂಪದೊಂದಿಗೆ ಗ್ರಾಮೀಣ ಜನರ ಬದುಕಿನ ಶೈಲಿಯನ್ನು ಬದಲಿಸುವ ಮಹತ್ತರ ಬದಲಾವಣೆಯ ನಿರೀಕ್ಷೆಯಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.