ಕಲ್ಮಂಜ : ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಹರೀಶ್ ಪೂಂಜಾ ಭೇಟಿ – ವೈಯಕ್ತಿಕ ನೆಲೆಯಲ್ಲಿ ಪರಿಹಾರ !

Advertisement

ಕಲ್ಮಂಜ, ಆ. 04 : ಕಳೆದ ಎರಡು ದಿನಗಳ ಹಿಂದೆ ಧಾರಕಾರ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಸಂಕಷ್ಟ ಎದುರಿಸುತ್ತಿರುವ ಕುಟುಂಬಸ್ಥರಿಗೆ ವೈಯಕ್ತಿಕ ನೆಲೆಯಲ್ಲಿ ಆರ್ಥಿಕ ಸಹಾಯ ನೀಡಿದರು.

Advertisement

ಗ್ರಾಮದ ಗಾಣದಕೊಟ್ಟಿಗೆ ನಿವಾಸಿ ಗಂಗಾಧರ ಗೌಡ ಎಂಬವರ ಮನೆ ಬಳಿಯ ತಡೆಗೋಡೆ ಕುಸಿದು ಮನೆಗೆ ಹಾನಿಯಾಗಿತ್ತು. ಮುಂಡಾಜೆ ಗ್ರಾಮದ ನಿವಾಸಿ ಚೋಮು ನಲಿಕೆ ಎಂಬವರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿತ್ತು. ಸತ್ಯನಪಲ್ಕೆ ನಿವಾಸಿ ಯಮುನಾ ಎಂಬವರ ಮನೆಯೂ ಹಾನಿಯಾಗಿತ್ತು.

Advertisement

ಧರ್ಮಸ್ಥಳ ಗ್ರಾಮ ಕಟ್ಟದ ಬೈಲು ನಾರಾಯಣ ಗೌಡ, ಅನಂತ ಶೆಟ್ಟಿಗಾರ್ ಮನೆಯ ಹಿಂಬದಿಯ ಗುಡ್ಡ ಕುಸಿದು, ಸಮಸ್ಯೆ ಎದುರಾಗಿತ್ತು. ಮಾಹಿತಿ ಪಡೆದ ಶಾಸಕರು ಹಾನಿಗೊಂಡ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳ ಗ್ರಾಮದ ಎರಡು ಕುಟುಂಬಗಳಿಗೆ ಆರ್ಥಿಕ ನೆರವಿಗಾಗಿ ಚೆಕ್ ವಿತರಿಸಿದರು.

ಮನೆಯವರೊಂದಿಗೆ ಮಾತನಾಡಿದ ಅವರು, ತಕ್ಷಣವೇ ಮಳೆ ಹಾನಿ ಪರಿಹಾರವನ್ನು ನೀಡುವ ಭರವಸೆಯನ್ನೂ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ