ಮಂಗಳೂರು : ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ – ಪೊಲೀಸ್ ವಶಕ್ಕೆ

Advertisement

ಮಂಗಳೂರು, ಡಿ. 22 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಾವಣೆ ವಿರುದ್ಧ ಸ್ವಾಯತ್ತ ಸಂಸ್ಥೆ ಇ.ಡಿ. ಯ ದುರುಪಯೋಗವನ್ನು ಖಂಡಿಸಿ ದ.ಕ ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ನಾಯಕರನ್ನು ಸೋಮವಾರ ಪೊಲೀಸರು ತಡೆದು, ವಶಕ್ಕೆ ಪಡೆದರು.

Advertisement

ಮಂಗಳೂರು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಬಳಿ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ, ಮಾಜಿ ಸಂಸದ ವಿಜಯ್ ಇಂದರ್ ಸಿಂಗ್ಲಾ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಸ್ವಾಯತ್ತ ಸಂಸ್ಥೆಯಾದ ಇ.ಡಿ. ಯನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ವಿರುದ್ಧದ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿದರು.

Advertisement

ಪ್ರತಿಭಟನೆಯ ಬಳಿಕ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮೂಲಕ ಹೊರಟು ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಧರಣಿ ನಡೆಸಿ ಪಿವಿಎಸ್ ಬಳಿಯ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಮಲ್ಲಿಕಟ್ಟೆ ಸರ್ಕಲ್ ಬಳಿ ತಡೆದು, ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ.ಆರ್.ಲೋಬೊ, ಪಕ್ಷದ ಪ್ರಮುಖರಾದ ಎಂ.ಎ.ಗಪೂರ್, ಇನಾಯತ್ ಅಲಿ, ಸದಾಶಿವ ಉಳ್ಳಾಲ, ಕೆ.ಅಶ್ರಫ್, ಶಾಲೆಟ್ ಪಿಂಟೊ, ಅಪ್ಪಿ, ಅಬ್ದುಲ್ ರವೂಫ್, ಸುರೇಶ್ ಬಳ್ಳಾಲ್, ಎಂ.ಎಸ್ ಮುಹಮ್ಮದ್, ಶಶೀಧರ ಹೆಗ್ಡೆ, ಎಸ್ ಅಪ್ಪಿ ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ