ಮಂಗಳೂರು : ಕಲಬುರ್ಗಿ ಜಿಲ್ಲೆಗಿಂತ ನಮ್ಮ ಜಿಲ್ಲೆ ಎಷ್ಟು ಮುಂದುವರಿದಿದೆ ಎಂಬುದನ್ನು ಖರ್ಗೆ ತಿಳಿದುಕೊಳ್ಳಲಿ – ವೇದವ್ಯಾಸ್

Advertisement

ಮಂಗಳೂರು, ಫೆ. 19 : ಪ್ರಿಯಾಂಕ್ ಖರ್ಗೆ ನಮ್ಮ ಕರಾವಳಿ ಬಗ್ಗೆ ಹೇಳಿಕೆ ನೀಡುವ ಮೊದಲು ಅವರ ಜಿಲ್ಲೆಗಿಂತ ನಮ್ಮ ಈ ಭಾಗ ಎಷ್ಟು ಮುಂದುವರಿದಿದೆ ಎಂಬುದನ್ನು ತಿಳಿದುಕೊಳ್ಳಲಿ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.

Advertisement

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮ.ನ.ಪಾ ಕಚೇರಿ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ಮಾತನಾಡಿದ ಅವರು, ವಿಬಿ-ಜಿ ರಾಮ್ ಜಿ ಕಾಯ್ದೆ ಮೂಲಕ ಬಡವರಿಗೆ ದುಡಿಯಲು ಹೆಚ್ಚಿನ ಅವಕಾಶ ನೀಡಿದರೂ ಕಾಂಗ್ರೆಸ್ಸಿಗರು ವಿರೋಧಿಸುತ್ತಿದ್ದಾರೆ ಎಂದರೆ ಅವರ ಉದ್ದೇಶ ಬೇರೆ ಏನೋ ಇದೆ. ಈ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದು, ಇ -ಖಾತಾ ಸಿಗದೇ, ಜೈಲ್ ಜಾಮರ್ ನಿಂದ ಜನರು ತೊಂದರೆ ಅನುಭವಿಸುತ್ತಿರುವಾಗ, ಕೆಂಪು ಕಲ್ಲು,- ಮರಳು ಸಿಗದೇ ಒದ್ದಾಡುತ್ತಿದ್ದಾಗ ಈ ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿದ್ರಾ ? ಎಂದು ಪ್ರಶ್ನಿಸಿದರು.

Advertisement

ಬಳಿಕ ಮಾತಾಡಿದ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸ್ವತಃ ರಾಜೀವ್ ಗಾಂಧಿಯೇ ತಮ್ಮ ಸರಕಾರ ಒಂದು ರೂಪಾಯಿ ಕೊಟ್ರೆ ಅದರಲ್ಲಿ ಕೆಲವೇ ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂದು ಹೇಳಿ ವೈಫಲ್ಯ ವ್ಯಕ್ತಪಡಿಸಿದ್ದರು. ಆದರೆ ಈಗ ಒಂದೇ ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಆಸ್ಪದವಿಲ್ಲದೆದೇ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ವಿಬಿ ಜಿ ರಾಮ್ ಜಿ. ವಿಧಿಯಿಲ್ಲದೇ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಅಷ್ಟೇ ಎಂದರು.

ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ತಿಲಕ್ ರಾಜ್ ಕೃಷ್ಣಾಪುರ, ಪೂರ್ಣಿಮಾ ಎಂ., ಸಂಜಯ್ ಪ್ರಭು, ಶಾನವಾಜ್, ಜಗನ್ನಾಥ್, ಸುಧೀರ್ ಶೆಟ್ಟಿ ಕಣ್ಣೂರು, ನಂದನ್ ಮಲ್ಯ, ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ