ನವದೆಹಲಿ : ಯುಗಾದಿ ಹಬ್ಬದಂದು ಪ್ರಧಾನಿ ಮೋದಿ ವಿಭಿನ್ನ ಶುಭಾಷಯ – ಕನ್ನಡಿಗರಿಗೆ ಕನ್ನಡದಲ್ಲೇ ಸಂದೇಶದ ವಿಶೇಷ !

ನವದೆಹಲಿ, ಮಾ. 19 : ಚಾಂದ್ರಮಾನ ಯುಗಾದಿ ಹಾಗೂ ಹೊಸ ವರ್ಷದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಹೃತ್ತೂರ್ವಕ ಶುಭಾಷಯಗಳನ್ನು ತಿಳಿಸಿದ್ದಾರೆ. ವಸಂತ ಋತುವಿನ ಆಗಮನವು ಹೊಸ ಚೈತನ್ಯ ಮತ್ತು ಅನೇಕ ಸಾಧ್ಯತೆಗಳನ್ನು ತರಲಿ ಎಂದು ಅವರು ಹಾರೈಸಿದ್ದಾರೆ.

Advertisement

“ಪವಿತ್ರ ಯುಗಾದಿಯ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಸುಖಮಯ ಹೊಸ ವರ್ಷದ ಶುಭಾಶಯಗಳು” ಎಂದು ತಮ್ಮ ಸಂದೇಶದಲ್ಲಿ ಉಲ್ಲೇಖಿಸಿರುವ ಮೋದಿ, ವಸಂತ ಕಾಲದ ಹಸಿರು, ಹೂವುಗಳ ಸುಗಂಧ ಮತ್ತು ಹಣ್ಣುಗಳ ಆಗಮನವನ್ನು ಹೊಸ ಶಕ್ತಿಯ ಸಂಕೇತವಾಗಿ ಬಣ್ಣಿಸಿದ್ದಾರೆ.

ಯುಗಾದಿಯು ಹೊಸ ಕೃಷಿ ಚಟುವಟಿಕೆಗಳ ಆರಂಭದ ಸಂಕೇತವಾಗಿದ್ದು, ಈ ಸಮಯದಲ್ಲಿ ರೈತರು ಹೊಸ ಆಶಾಭಾವನೆಯೊಂದಿಗೆ ಕೃಷಿ ಚಕ್ರಕ್ಕೆ ಸಜ್ಜಾಗುತ್ತಿರುವುದನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ಜೀವನದ ಸಿಹಿ-ಕಹಿಗಳನ್ನು ಸಮಾನವಾಗಿ ಸ್ವೀಕರಿಸುವ ಸಂದೇಶವನ್ನು ಈ ಹಬ್ಬ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಕರ್ನಾಟಕದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದು ವಿಶೇಷವಾಗಿದೆ. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಹಂಚಿಕೊಂಡ ಸಂದೇಶದಲ್ಲಿ “ಕರ್ನಾಟಕದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಯುಗಾದಿ ಹೊಸ ಭರವಸೆ ಮತ್ತು ಚೈತನ್ಯದ ಹಬ್ಬವಾಗಿದ್ದು, ಪ್ರತಿಯೊಬ್ಬರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಅವರು ಆಶಿಸಿದ್ದಾರೆ. ಕರ್ನಾಟಕದ ಮನೆಮನಗಳಲ್ಲಿ ಸುಖ, ಶಾಂತಿ, ಆರೋಗ್ಯ ಮತ್ತು ಐಶ್ವರ್ಯ ತುಂಬಲಿ ಎಂದು ಪ್ರಾರ್ಥಿಸಿದ್ದಾರೆ.

ವಿಕ್ರಮ ಸಂವತ್ 2083 ಮತ್ತು ಚೈತ್ರ ನವರಾತ್ರಿಯ ಅಂಗವಾಗಿ ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ದೆಹಲಿಯ ಜನತೆಗೆ ವಿಶೇಷ ಪತ್ರಗಳನ್ನು ಬರೆದಿದ್ದಾರೆ.

ಭಾರತೀಯ ಸಂಸ್ಕೃತಿಯಲ್ಲಿ ಈ ದಿನದ ಐತಿಹಾಸಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಅವರು ವಿವರಿಸಿದ್ದು, ಹೊಸ ವರ್ಷವು ದೇಶದಾದ್ಯಂತ ಸಮೃದ್ಧಿ ಮತ್ತು ಅಭಿವೃದ್ಧಿ ತರಲಿ ಎಂದು ಹಾರೈಸಿದ್ದಾರೆ. ಕಲಿಯುಗದ ಕಾಲಗಣನೆಯಾದ ಯುಗಾಬ್ದ 5128ನೇ ವರ್ಷಕ್ಕೆ ಕಾಲಿಡುತ್ತಿರುವುದು ನಮ್ಮ ಪುರಾತನ ಸಂಸ್ಕೃತಿಯ ಜೀವಂತಿಕೆಗೆ ಸಾಕ್ಷಿಯಾಗಿದೆ ಎಂದು ಮೋದಿ ಉಲ್ಲೇಖಿಸಿದ್ದಾರೆ. ಚೈತ್ರ ನವರಾತ್ರಿಯು ಜನರಲ್ಲಿ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬಲಿ ಎಂದು ಅವರು ಪ್ರಾರ್ಥಿಸಿದ್ದಾರೆ. ಹೊಸ ವರ್ಷವು ‘ವಿಕಸಿತ ಭಾರತ’ದ ಕನಸನ್ನು ನನಸು ಮಾಡಲು ಎಲ್ಲರಿಗೂ ಶಕ್ತಿ ನೀಡಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.