ಕುಂಭಮೇಳ ವೈರಲ್ ಹುಡುಗಿ ಮೊನಾಲಿಸಾ ಅಪ್ರಾಪ್ತೆ – ಪತಿ ಫರ್ಮನ್ ಖಾನ್ ವಿರುದ್ಧ ಪೋಕ್ಸೋ ಅಡಿ ಪ್ರಕರಣ !

Advertisement

ನವದೆಹಲಿ, ಏ. 10 : ಕುಂಭಮೇಳ ಸಂಧರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರಾತ್ರೋರಾತ್ರಿ ಸೆನ್ಸೇಷನ್ ಸೃಷ್ಟಿಸಿ ಸುದ್ದಿಯಾಗಿದ್ದ ಕುಂಭಮೇಳದ ಹುಡುಗಿ ಮೊನಾಲಿಸಾ ಇದೀಗ ಮದುವೆ ವಿಚಾರದಲ್ಲಿ ಸುದ್ದಿಯಲ್ಲಿದ್ದಾರೆ.

ಅಂತರ್ಧರ್ಮ ವಿವಾಹದ ಮೂಲಕ ಗಮನ ಸೆಳೆದಿದ್ದ ಮೊನಾಲಿಸಾ ಮೂಲತಃ ಅಪ್ರಾಪ್ತೆ ಎಂಬ ಆಘಾತಕಾರಿ ವಿಷಯ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ಆಕೆಯ ಪತಿ ಫರ್ಮನ್ ಖಾನ್ ವಿರುದ್ಧ ಗಂಭೀರ ಕಾನೂನು ಕ್ರಮ ಜರುಗಿಸಲಾಗಿದೆ. ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ವಿವರವಾದ ತನಿಖೆಯ ನಂತರ, ಮೊನಾಲಿಸಾ ಮದುವೆಯ ಸಮಯದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ದೃಢಪಟ್ಟಿದೆ. ಇದರ ಬೆನ್ನಲ್ಲೇ, ಮಧ್ಯಪ್ರದೇಶದ ಖಾರ್ಗೋನೆ ಜಿಲ್ಲೆಯ ಮಹೇಶ್ವರ್ ಪೊಲೀಸ್ ಠಾಣೆಯಲ್ಲಿ ಫರ್ಮನ್ ಖಾನ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

ಮೊನಾಲಿಸಾ ಅಪ್ರಾಪ್ತೆ – 16 ವರ್ಷ !

ಮೊನಾಲಿಸಾ ಮತ್ತು ಫರ್ಮನ್ ಖಾನ್ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಅಂತರ್ಧರ್ಮ ವಿವಾಹವಾದ್ದರಿಂದ ಸುದ್ದಿಯಲ್ಲಿದ್ದರು. ಆಕೆಯ ವಯಸ್ಸಿನ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಎನ್‌ಸಿಎಸ್‌ಟಿ ಅಧ್ಯಕ್ಷ ಅಂತರ್ ಸಿಂಗ್ ಆರ್ಯ ಅವರ ಮೇಲ್ವಿಚಾರಣೆಯಲ್ಲಿ ಕೇರಳ ಮತ್ತು ಮಧ್ಯಪ್ರದೇಶಗಳಲ್ಲಿ ತನಿಖೆ ನಡೆಸಲಾಯಿತು. ಮಹೇಶ್ವರದ ಅಧಿಕೃತ ಆಸ್ಪತ್ರೆ ದಾಖಲೆಗಳ ಪ್ರಕಾರ, ಮೋನಾಲಿಸಾ ಪಾರಧಿ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಡಿಸೆಂಬರ್ 30, 2009 ರಂದು ಜನಿಸಿದ್ದಾರೆ. ಮಾರ್ಚ್ 11, 2026 ರಂದು ಮದುವೆಯಾದ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ ತುಂಬಿತ್ತು.

ಕೇರಳದಲ್ಲಿ ಮದುವೆ ನೋಂದಣಿ ಮಾಡುವಾಗ ಮೊನಾಲಿಸಾ ಅವರನ್ನು ವಯಸ್ಕಳೆಂದು ತೋರಿಸಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಲಾಗಿತ್ತು. ಆಕೆಯನ್ನು ಉದ್ದೇಶಪೂರ್ವಕವಾಗಿ 18 ವರ್ಷ ಮೇಲ್ಪಟ್ಟವಳೆಂದು ಬಿಂಬಿಸಲು ಈ ಸಂಚು ರೂಪಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ದಾಖಲೆಗಳನ್ನು ರದ್ದುಗೊಳಿಸಲು ಆದೇಶ

ದಂಪತಿಗಳು ನೀಡಿದ ಆಧಾರ್ ವಿವರಗಳನ್ನು ನಂಬಿ ಕೇರಳದ ದೇವಸ್ಥಾನವೊಂದರಲ್ಲಿ ಇವರ ಮದುವೆ ಮಾಡಿಸಲಾಗಿತ್ತು ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಕಲಿ ದಾಖಲೆಗಳ ಆಧಾರದ ಮೇಲೆ ಮದುವೆ ನೋಂದಣಿಯಾಗಿತ್ತು. ಈಗ ಈ ನಕಲಿ ದಾಖಲೆಗಳನ್ನು ರದ್ದುಗೊಳಿಸಲು ಆದೇಶಿಸಲಾಗಿದೆ.

ಮೊನಾಲಿಸಾ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿರುವುದರಿಂದ, ಫರ್ಮನ್ ಖಾನ್ ವಿರುದ್ಧ ಪೋಕ್ಸೋ ಕಾಯ್ದೆ ಮಾತ್ರವಲ್ಲದೆ, ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಕೆಲವು ಸಂಘಟನೆಗಳ ಕೈವಾಡವಿರುವ ಬಗ್ಗೆಯೂ ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ತನಿಖೆ ಮುಂದುವರಿದಿದೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗವು, ಕೇರಳ ಮತ್ತು ಮಧ್ಯಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಏಪ್ರಿಲ್ 22 ರಂದು ನವದೆಹಲಿಯಲ್ಲಿ ಆಯೋಗದ ಮುಂದೆ ಹಾಜರಾಗಲು ಸಮನ್ಸ್ ನೀಡಿದೆ. ಅಲ್ಲದೆ, ಪ್ರತಿ ಮೂರು ದಿನಕ್ಕೊಮ್ಮೆ ಪ್ರಕರಣದ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.