ಮೂಡುಬಿದಿರೆ : ಕಾರು, ಗೂಡ್ಸ್ ಟೆಂಪೋ ಮುಖಾಮುಖಿ ಢಿಕ್ಕಿ – ಮೂವರಿಗೆ ಗಾಯ

Advertisement

ಮೂಡುಬಿದಿರೆ, ಜ. 28 : ಕಾರು ಮತ್ತು ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಕಾರ್ಕಳ ಕಡೆಯಿಂದ ಹೊಸ್ಮಾರು ಕಡೆಗೆ ಸಾಗುತ್ತಿದ್ದ ಗೂಡ್ಸ್ ಟೆಂಪೋ ಹಾಗೂ ಹೊಸ್ಮಾರು ಕಡೆಯಿಂದ ಕಾರ್ಕಳದತ್ತ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರು ಮತ್ತು ಗೂಡ್ಸ್ ಟೆಂಪೋ ಎರಡೂ ಗಂಭೀರವಾಗಿ ಜಖಂಗೊಂಡಿವೆ.

ಅಪಘಾತದಲ್ಲಿ ಗೂಡ್ಸ್ ಟೆಂಪೋ ಚಾಲಕ ಕೃಷ್ಣರಾಜ್, ಕಾರು ಚಾಲಕ ಲಲಿತೇಶ್ ಗೌಡ ಹಾಗೂ ಬಾಲಕ ಪ್ರವೀಣ್ ಗಾಯಗೊಂಡಿದ್ದು, ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೊಳಗಾದ ಗೂಡ್ಸ್‌ ಟೆಂಪೋದಲ್ಲಿ ಕಾರ್ಕಳ ಕಡೆಯಿಂದ ಮನೆ ಖಾಲಿ ಮಾಡಿ ಸಾಮಗ್ರಿಗಳನ್ನು ಸ್ಥಳಾಂತರಿಸಲು ತೆರಳುತ್ತಿದ್ದ ಕುಟುಂಬ ಪ್ರಯಾಣಿಸುತ್ತಿತ್ತು ಎಂದು ತಿಳಿದುಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ