ಮಂಗಳೂರು : ಎಂಆರ್ ಪಿಎಲ್ ನಲ್ಲಿ ಭೀಕರ ಸ್ಫೋಟ – ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮನೀಶ್ ಸಾವು !

ಮಂಗಳೂರು, ಸೆ. 30 : ನಗರದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯ ಹೈಡೋ ಸಲ್ಪರ್ ಟೀಟ್‌ಮೆಂಟ್ ಘಟಕದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟ ಅವಘಡದಲ್ಲಿ ಓರ್ವ ಮೃತ ಪಟ್ಟಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ 8 ಜನ ಕಾರ್ಮಿಕರು ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ ಕಾರ್ಮಿಕನನ್ನು ಮುಲ್ಕಿ ನಿವಾಸಿ, 30 ವರ್ಷ ಪ್ರಾಯದ ಮನೀಶ್ ಎಂದು ಗುರುತಿಸಲಾಗಿದೆ.

ಇವರು ಘಟಕದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಘಟನೆಯಲ್ಲಿ ಮನೀಶ್ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಫೋಟದ ವೇಳೆ ಕರ್ತವ್ಯದಲ್ಲಿದ್ದ ರಾಜೇಶ್ ಬ್ಯಾಪ್ಟಿಸ್ಟ್ ಎಂಬ ಕಾರ್ಮಿಕ ಶೇ. 35ರಷ್ಟು ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಮತ್ತಷ್ಟು 8 ಮಂದಿ ಕಾರ್ಮಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !